ವೇಣೂರು: ಇಲ್ಲಿಯ ನಿಟ್ಟಡೆ ಕುಂಭಶ್ರೀ ಆಂಗ್ಲಮಾಧ್ಯಮ ವಿದ್ಯಾಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.
ಯೋಗ ತರಬೇತುದಾರರಾದ ಸತೀಶ್ ಆಚಾರ್ಯ ಅವರು ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಯೋಗ ತರಬೇತಿಯನ್ನು ನೀಡಿದರು. ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಶುಭ ನಿತೇಶ್ ಯೋಗದ ಮಹತ್ವವನ್ನು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಶಾಲಾ ಸಂಸ್ಥಾಪಕರಾದ ಗಿರೀಶ್ ಕೆ.ಹೆಚ್, ಸಂಚಾಲಕರಾದ ಅಶ್ವಿತ್ ಕುಲಾಲ್, ಪ್ರೌಢ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಮಮತಾ ಶಾಂತಿ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶೋಭಾ ಎಲ್.ಎನ್. ರಾವ್ ಹಾಗೂ ಎಲ್ಲಾ ಶಿಕ್ಷಕ-ಶಿಕ್ಷಕ ವೃಂದದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.



