ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಮತ್ತು ಕಾಲೇಜು, ನಿಟ್ಟಡೆ ಇಲ್ಲಿ ನ. 15ರಂದು ವಲಯಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಭವ್ಯವಾಗಿ ನಡೆಯಿತು.
ಕಾರ್ಯಕ್ರಮವನ್ನು ಜೈನ ಕಾಲೇಜಿನ ಉಪನ್ಯಾಸಕರಾದ ಮಹಾವೀರ ಜೈನ್ ಮೂಡುಕೋಡಿ ಅವರು ಉದ್ಘಾಟಿಸಿ, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಶ್ರಮಿಸುವತ್ತ ಈ ವಿದ್ಯಾಸಂಸ್ಥೆ ಸದಾ ಮುಂದಿದೆ ಎಂದು ಶ್ಲಾಘಿಸಿದರು.
ಬೆಳ್ತಂಗಡಿ ತಾಲೂಕಿನ ಶಿಕ್ಷಣಾಧಿಕಾರಿ ಶ್ರೀಮತಿ ತಾರಾಕೇಸರಿ ಅವರು ಹಾಗೂ ನಿಟ್ಟಡೆ ಕ್ಲಸ್ಟರ್ ಸಿಆರ್ಪಿ ಶ್ರೀಮತಿ ಆರತಿ ಅವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ವೇಣೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಮಲ್ಲಿಕಾ ಕಾಶಿನಾಥ್ ಹೆಗ್ಡೆ ಅವರು ಮಾತನಾಡಿ, ಸಂಸ್ಥೆಯು ಶಿಸ್ತಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿ ಉತ್ತಮ ಮಟ್ಟಕ್ಕೆ ಬೆಳೆಯುತ್ತಿದೆ, ಎಂದು ಪ್ರಶಂಸೆ ವ್ಯಕ್ತಪಡಿಸಿದರು. ಶಾಲಾ ಸಂಸ್ಥಾಪಕರಾದ ಗಿರೀಶ್ ಕೆ.ಹೆಚ್. ಈ ಕಾರ್ಯಕ್ರಮವು ಪೋಷಕರ, ಶಿಕ್ಷಕರ ಹಾಗೂ ವಿದ್ಯಾರ್ಥಿಗಳ ಪರಿಶ್ರಮದಿಂದ ನಡೆಯುತ್ತಿದೆ ಎಂದು ತಿಳಿಸಿದರು.
ಕುಕ್ಕೆಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಅನಿತಾ ಕೆ, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ಚಂದ್ರಶೇಖರ್, ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ಗೋಪಾಲ ಶೆಟ್ಟಿ ಅವರು ಕಾರ್ಯಕ್ರಮಕ್ಕೆ ಶುಭಾಶಯಗಳನ್ನು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷರಾಗಿದ್ದ ಶಾಲಾ ಸಂಚಾಲಕರಾದ ಅಶ್ವಿತ್ ಕುಲಾಲ್ ಅವರು, ಸಂಸ್ಥಾಪಕರ ಮಾರ್ಗದರ್ಶನ ಮತ್ತು ಪೋಷಕರ ಬೆಂಬಲದಿಂದ ಈ ಕಾರ್ಯಕ್ರಮ ಯಶಸ್ವಿಯಾಗಿದೆ. ಮುಂದೆಯೂ ಎಲ್ಲರ ಸಹಕಾರ ಕೋರಿದರು.
ಈ ಕಾರ್ಯಕ್ರಮದಲ್ಲಿ ಕುಂಭಶ್ರೀ ವೈಭವ ಸಮಿತಿಯ ಪ್ರಧಾನ ಅಧ್ಯಕ್ಷರಾದ ಹರೀಶ್ ಕುಮಾ ಪೊಕ್ಕಿ, ಸಮಿತಿಯ ಅಧ್ಯಕ್ಷರಾದ ಅಶ್ವಿತ್ ಕುಲಾಲ್, ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷರಾದ ವಸಂತ್ ಪಡೀಲ್, ಸಂಘದ ಎಲ್ಲಾ ಸದಸ್ಯರು, ಕಾಲೇಜಿನ ಪ್ರಾಂಶುಪಾಲರಾದ ಓಮನ, ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಮಮತಾ ಶಾಂತಿ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಶೋಭಾ ಎಲ್.ಎನ್ ಹಾಗೂ ಶಿಕ್ಷಕ, ಶಿಕ್ಷಕೇತರ ವೃಂದ ಉಪಸ್ಥಿತರಿದ್ದರು. ಒಟ್ಟು ೯ ಶಾಲೆಗಳ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದರು.
ಫಲಿತಾಂಶ:
ಕಿರಿಯ ವಿಭಾಗ: ಪ್ರಥಮ ಸಮಗ್ರ ಚಾಂಪಿಯನ್: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಿಟ್ಟಡೆ
ದ್ವಿತೀಯ ಸಮಗ್ರ ಚಾಂಪಿಯನ್: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆ, ನಿಟ್ಟಡೆ ವೇಣೂರು
ಹಿರಿಯ ವಿಭಾಗ: ಪ್ರಥಮ ಸಮಗ್ರ ಚಾಂಪಿಯನ್: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆ, ನಿಟ್ಟಡೆ ವೇಣೂರು
ದ್ವಿತೀಯ ಸಮಗ್ರ ಚಾಂಪಿಯನ್: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕುಕ್ಕೇಡಿ
ಕಾರ್ಯಕ್ರಮವನ್ನು ಪ್ರೌಢಶಾಲಾ ವಿಭಾಗದ ಕನ್ನಡ ಶಿಕ್ಷಕರಾದ ಸುಮನ್ ಮತ್ತು ಆಂಗ್ಲ ಭಾಷಾ ಶಿಕ್ಷಕರಾದ ಶ್ರೀಮತಿ ರಶ್ಮಿ ನಿರೂಪಿಸಿದರು. ಕಾಲೇಜಿನ ಉಪನ್ಯಾಸಕರಾದ ಮನೋಜ್ ಸ್ವಾಗತಿಸಿ, ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಶುಭ ವಂದನೆ ಸಲ್ಲಿಸಿದರು.









