ಯಶಸ್ವಿನಿ ಯೋಜನೆಯ ಸದಸ್ಯತ್ವ ನೋಂದಣಿಗೆ ಸೂಚನೆ

 

 

 

 

ಚಿತ್ರದುರ್ಗ(ಕರ್ನಾಟಕ ವಾರ್ತೆ).ಡಿ.9:
2022-23ನೇ ಸಾಲಿಗೆ ಯಶಸ್ವಿನಿ ಸಹಕಾರ ಸದಸ್ಯರ ಆರೋಗ್ಯ ರಕ್ಷಣಾ ಯೋಜನೆಯು ಅನುಷ್ಠಾನಗೊಂಡಿದ್ದು, ಈ ಯೋಜನೆಯಡಿ ಸದಸ್ಯರನ್ನು ನೋಂದಾಯಿಸುವ ಪ್ರಕ್ರಿಯೆಯು ಪ್ರಾರಂಭವಾಗಿದ್ದು, ಪ್ರಯುಕ್ತ ಗ್ರಾಮೀಣ ಪ್ರದೇಶದ ಹಾಗೂ ನಗರ ಪ್ರದೇಶದ ಸಹಕಾರ ಸಂಘಗಳ ಸದಸ್ಯರು ಈ ಸದಾವಕಾಶವನ್ನು ಉಪಯೋಗಿಸಿಕೊಂಡು ಯಶಸ್ವಿನಿ ಯೋಜನೆಯಡಿ ನಿಗಧಿತ ವಂತಿಗೆಯನ್ನು ಪಾವತಿಸಿ ನೋಂದಾಯಿಸಿಕೊಳ್ಳಬೇಕಾಗಿರುತ್ತದೆ.
ಸರ್ಕಾರವು ಗ್ರಾಮೀಣ ಯಶಸ್ವಿನಿ ಯೋಜನೆಯಡಿ ನೋಂದಾಯಿಸಿಕೊಳ್ಳುವ ಸದಸ್ಯರ ವಂತಿಗೆ ರೂ.500-00ಗಳ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸದಸ್ಯರುಗಳ ವಂತಿಗೆಯನ್ನು ಸರ್ಕಾರವೇ ಭರಿಸಲಿದೆ. ನಗರ ಪ್ರದೇಶದ ಸಹಕಾರ ಸಂಘಗಳ ಸದಸ್ಯರಿಗೆ ಯೋಜನೆಯಡಿ ನೋಂದಾಯಿಸಿಕೊಳ್ಳುವ ಸದಸ್ಯರು ರೂ.1000 ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸದಸ್ಯರುಗಳ ವಂತಿಗೆಯನ್ನು ಸರ್ಕಾರವೇ ಭರಿಸಲಿದ್ದು, ಯಶಸ್ವಿನಿ ಯೋಜನೆಯಲ್ಲಿ ಸದಸ್ಯರನ್ನು ನೊಂದಾಯಿಸುವ ಪ್ರಕ್ರಿಯೆಯು ಇದೇ ಡಿಸೆಂಬರ್ 31ಕ್ಕೆ ಮುಕ್ತಾಯವಾಗುವುದು.
ಪ್ರಯುಕ್ತ ಎಲ್ಲಾ ಗ್ರಾಮಾಂತರ ರೈತ ಸಹಕಾರಿ ಸದಸ್ಯರು ಹಾಗೂ ನಗರ ಸಹಕಾರಿ ಸದಸ್ಯರುಗಳ ಮೇಲ್ಕಂಡ ಅವಕಾಶವನ್ನು ಉಪಯೋಗಿಸಿಕೊಳ್ಳಬೇಕು ಎಂದು ಚಿತ್ರದುರ್ಗ ಸಹಕಾರ ಸಂಘಗಳ ಉಪ ನಿಬಂಧಕರು ತಿಳಿಸಿದ್ದಾರೆ.

 

 

[t4b-ticker]

You May Also Like

More From Author

+ There are no comments

Add yours