ಚಿತ್ರದುರ್ಗ (ಕರ್ನಾಟಕ ವಾರ್ತೆ) ಮಾ.04:
ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ಕಾಯ್ದೆ 2015ರ ಸೆಕ್ಷನ್ 41ರಲ್ಲಿ ನೊಂದಣಿಯಾಗದೆ ಇರುವ ಮಕ್ಕಳ ಪಾಲನಾ ಸಂಸ್ಥೆಗಳನ್ನು ನೊಂದಾಯಿಸಬೇಕಾಗಿದೆ.
ಜಿಲ್ಲೆಯಲ್ಲಿ ಪಾಲನೆ, ಪೋಷಣೆ ಅವಶ್ಯಕತೆ ಇರುವ ಮಕ್ಕಳಿಗೆ ಪುನರ್ವಸತಿ ಕಲ್ಪಿಸಲು ಮಕ್ಕಳ ಪಾಲನಾ ಸಂಸ್ಥೆಗಳನ್ನು ನಡೆಸುತ್ತಿದ್ದಲ್ಲಿ, ಅಂತಹ ಸಂಸ್ಥೆಗಳನ್ನು ನೋಂದಾಯಿಸಲು ಚಿತ್ರದುರ್ಗ ನಗರದ ಸ್ಟೇಡಿಯಂ ಹತ್ತಿರದ ಜಿಲ್ಲಾ ಭವನ ಆವರಣದಲ್ಲಿರುವ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕಚೇರಿ ಸಂಪರ್ಕಿಸುವುದು.
ಇದನ್ನೂ ಓದಿ: ಲೋಕಸಭೆಗೆ ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ರೆಡಿ, ಚಿತ್ರದುರ್ಗಕ್ಕೆ ಯಾರು ಅಭ್ಯರ್ಥಿ?
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಿ.ಸವಿತಾ ಅವರ ದೂರವಾಣಿ ಸಂಖ್ಯೆ 9741812148 ಮತ್ತು ಮಕ್ಕಳ ರಕ್ಷಣಾಧಿಕಾರಿ ಎನ್.ಕೆ.ಹೆಚ್.ಸ್ವಾಮಿ ದೂರವಾಣಿ ಸಂಖ್ಯೆ ಅವರನ್ನು 6360846383 ಗೆ ಸಂಪರ್ಕಿಸಲು ಕೋರಿದೆ.
ಒಂದು ವೇಳೆ ನೊಂದಾಯಿಸಿಕೊಳ್ಳದ ಅನಧಿಕೃತ ಮಕ್ಕಳ ಪಾಲನಾ ಸಂಸ್ಥೆಗಳ ವಿರುದ್ದ ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ಕಾಯ್ದೆ 2015ರ ಸೆಕ್ಷನ್ 42ರನ್ವಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಿ. ಸವಿತಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
+ There are no comments
Add yours