ವೇಣೂರು: ಇಲ್ಲಿಯ ಸರಕಾರಿ ಪ.ಪೂ. ಕಾಲೇಜು ಪ್ರೌಢಶಾಲಾ ವಿಭಾಗದ ಪ್ರಾಯೋಜಿತ ಶಾಲಾ ಕೊಠಡಿಗಳ ನೂತನ ಕಟ್ಟಡದ ಶಿಲಾನ್ಯಾಸ ಮತ್ತು ನೂತನ ಸಭಾಂಗಣದ ಲೋಕಾರ್ಪಣೆ, ಗುರು ನಮನ, ಸಾಧಕರಿಗೆ ಗೌರವ, ಪ್ರತಿಭಾ ಪುರಸ್ಕಾರ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವು ನ. 30ರಂದು ಬೆಳಿಗ್ಗೆ 9-0ರಿಂದ ನಡೆಯಲಿದೆ.
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ವೇಣೂರು ಗ್ರಾ.ಪಂ. ಅಧ್ಯಕ್ಷೆ ಮಲ್ಲಿಕಾ ಕಾಶಿನಾಥ್ ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದಾರೆ. ಸಮಾರಂಭದಲ್ಲಿ ಒಎಸ್ಎಎಟಿ ಸಂಸ್ಥೆಯ ಕಾರ್ಯನಿರ್ವಹಣಾಧಿಕಾರಿ ಬಾಲಕೃಷ್ಣ ರಾವ್, ಒಎಸ್ಎಎಟಿ ಚಾಂಪಿಯನ್ ಕಿಶೋರ್ ಕುಮಾರ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ಶಾಲೆಯ ಪ್ರಕಟಣೆ ತಿಳಿಸಿದೆ.









