








ಆರಂಬೋಡಿ: ತಾಲೂಕಿನ ಪೂಂಜದ ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನ.16 ರಂದು ರಾತ್ರಿ 7:00 ಗಂಟೆಗೆ ಕಾರ್ತಿಕ ಮಾಸದ ಪೂಂಜ ದೀಪೋತ್ಸವ ನಡೆಯಲಿದೆ.
ಈ ನಿಟ್ಟಿನಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಗಂಧ -ಪ್ರಸಾದ ಸ್ವೀಕರಿಸಿ ದೇವರ ಕೃಪೆಗೆ ಪಾತ್ರರಾಗುವಂತೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.