ಗ್ರಾಮೀಣ ಜನರ ಸಮಸ್ಯೆಗಳಿಗೆ ಅಧಿಕಾರಿಗಳು ಕೂಡಲೇ ಸ್ಪಂದಿಸಿ: ಟಿ.ರಘುಮೂರ್ತಿ

 

ಚಳ್ಳಕೆರೆ-೦೫ ಸರ್ಕಾರ ಮತ್ತು ಸಾರ್ವಜನಿಕರ ನಡುವೆ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಸ್ನೇಹ ಜೀವಿಗಳಾಗಿ ಕಾರ್ಯನಿರ್ವಹಿಸಬೇಕು. ಸಮಸ್ಯೆಗಳನ್ನು ಹೊತ್ತುತರುವ ಸಾರ್ವಜನಿಕರಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು. ಸಮಸ್ಯೆಗಳ ಪರಿಹಾರವನ್ನು ಕಂಡುಕೊಳ್ಳುವಲ್ಲಿ ಅಧಿಕಾರಿ ವರ್ಗ ಜಾಗೃತೆ ವಹಿಸಬೇಕೆಂದು ಶಾಸಕ(mla) ಟಿ.ರಘುಮೂರ್ತಿ ತಿಳಿಸಿದರು.

ಅವರು, ಸಾಣೀಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನಸಂಪರ್ಕ ಸಭೆಯನ್ನು ಉದ್ಘಾಟಿಸಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಈಗಾಗಲೇ ಮೂರನೇ ಬಾರಿಗೆ ಶಾಸಕನಾದ  ಮೇಲೆ ಕೇವಲ ನಾಲ್ಕು ತಿಂಗಳ ಅವಧಿಯಲ್ಲಿ ಬಹುತೇಕ ಎಲ್ಲಾ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜನಸಂಪರ್ಕ ಸಭೆಯನ್ನು ನಡೆಸಿ ಪರಿಹಾರವನ್ನು ರೂಪಿಸಲಾಗಿದೆ. ಕೆಲವು ಸಂದರ್ಭಗಳಲ್ಲಿ ಮಾತ್ರ ಸರ್ಕಾರ ಮಟ್ಟದಲ್ಲಿ ಆಗಬೇಕಾದ ಕೆಲಸ ಕಾರ್ಯಗಳಿಗೆ ವಿಳಂಬವಾಗುತ್ತದೆ. ಅದನ್ನು ಹೊರತು ಪಡಿಸಿ ಸ್ಥಳೀಯವಾಗಿ ಬಗೆಹರಿಯಬಹುದಾದ ಸಮಸ್ಯೆಗಳಿಗೆ ಅಧಿಕಾರಿಗಳು ಸೂಕ್ತ ಉತ್ತರ ನೀಡಲು ಉತ್ಸಾಹ ತೋರುತ್ತಿಲ್ಲ. ಇದರಿಂದ ಸಾರ್ವಜನಿಕರಿಗೆ ಸರ್ಕಾರದ ಮೇಲೆ ವಿಶ್ವಾಸ ಮೂಡಲು ಸಾಧ್ಯವಾಗುತ್ತಿಲ್ಲ. ಜನರ ಸಮಸ್ಯೆಗಳಿಗೆ ಉತ್ತರಗಳು ನಿಮ್ಮಲ್ಲೇ ಇರುತ್ತವೆ ಅವುಗಳನ್ನು ನಿಯಮಬದ್ದವಾಗಿ ಜಾರಿಗೊಳಿಸುವಲ್ಲಿ ಜನರು ಸಹಕಾರ ಪಡೆಯಬೇಕು. ಸರ್ಕಾರದ ಮೇಲೆ ಬೊಟ್ಟು ತೋರಿಸುವ ಕಾರ್ಯವನ್ನು ಯಾರೂ ಮಾಡಬಾರದು ಎಂದರು.

ಇದೇ ಸಂದರ್ಭದಲ್ಲಿ ಸಾರ್ವಜನಿಕರು ನಿವೇಶನ, ಕುಡಿಯುವ ನೀರು, ಮನೆ, ಹಕ್ಕುಪತ್ರ ವಿತರಣೆ, ಬೆಸ್ಕಾಂ ಸಮಸ್ಯೆ, ಗೃಹಲಕ್ಷಿö್ಮ, ಅನ್ನಭಾಗ್ಯ ಯೋಜನೆ ಹಣ ವಿಳಂಬ¨ ಮುಂತಾದ ಸಮಸ್ಯೆಗಳ ಬಗ್ಗೆ ಶಾಸಕರ ಗಮನ ಸೆಳೆದರು. ಅಂಗನವಾಡಿ ಕಾರ್ಯಕರ್ತೆಯೊಬ್ಬರು ಗ್ರಾಮ ಪಂಚಾಯಿತಿ ಈ ಹಿಂದೆ ೨೦೦೯ರಲ್ಲಿ ನೀಡಿದ ನಿವೇಶನವನ್ನು ಬೇರೆಯವರು ಆಕ್ರಮಿಸಿಕೊಂಡಿದ್ದು ಅದನ್ನು ಮರಳಿ ಕೊಡಿಸುವಂತೆ ಮನವಿ ಮಾಡಿದರು.

ಇದನ್ನೂ ಓದಿ: ನಾಳೆ ಚಿತ್ರದುರ್ಗಕ್ಕೆ ಸಿಎಂ ಸಿದ್ದರಾಮಯ್ಯ

ಇದೇ ಸಂದರ್ಭದಲ್ಲಿ ಗ್ರಾಮದ ಮಹಿಳೆಯೊಬ್ಬರು ಪದೇ, ಪದೆ ಪೊಲೀಸ್ ಠಾಣೆಗೆ ದೂರು ನೀಡುವ ಬಗ್ಗೆ ಮಹಿಳೆಯರು ಆರೋಪಿಸಿದಾಗ ಸಭೆಯಲ್ಲಿದ್ದ ಚಳ್ಳಕೆರೆ ಠಾಣಾ ಇನ್ಸ್ಪೆಕ್ಟರ್ ರಾಜಫಕೃದ್ಧೀನ್ ದೇಸಾಯಿಗೆ ಶಾಸಕರು ಸೂಚನೆ ನೀಡಿದರು. ಗ್ರಾಮೀಣ ಭಾಗಗಳಲ್ಲಿ ಉದ್ಭವವಾಗುವ ಸಣ್ಣಪುಟ್ಟ ಸಮಸ್ಯೆಗಳ ನಿವಾರಣೆಗೆ ಕಂದಾಯ ಇಲಾಖೆ,ತಾಲ್ಲೂಕು ಪಂಚಾಯಿತಿ, ಕೃಷಿ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಹೆಚ್ಚು ಶ್ರಮಿಸಬೇಕು ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ತಹಶೀಲ್ದಾರ್ ರೇಹಾನ್ ಪಾಷ, ಶಾಸಕರ ಅಧ್ಯಕ್ಷತೆಯಲ್ಲಿ ಜನಸ್ಪಂದನಾ ಕಾರ್ಯಕ್ರಮದ ಮೂಲಕ ತಾಲ್ಲೂಕು ಆಡಳಿತ ಸಾರ್ವಜನಿಕ ಹಲವಾರು ಸಮಸ್ಯೆಗಳ ನಿವಾರಣೆಗೆ ಪ್ರಾಮಾಣಿಕ ಪ್ರಯತ್ನ ನಡೆಸಿದೆ. ಸಾಣೀಕೆರೆ ಗ್ರಾಮದಲ್ಲಿ ನಿವೇಶನ ರಹಿತರಿಗೆ ನಿವೇಶನ ನೀಡಲು ೧೬೨ ನಿವೇಶನಗಳನ್ನು ಗುರುತಿಸಲಾಗಿದೆ. ಸಾಮಾಜಿಕ ಭದ್ರತಾ ಯೋಜನೆಯಡಿಯಲ್ಲಿ ಫಲಾನುಭವಿಗಳಿಗೆ ಸರ್ಕಾರದಿಂದ ಬಂದ ಹಣವನ್ನು ಸಕಾಲದಲ್ಲಿ ತಲುಪಿಸುವ ವ್ಯವಸ್ಥೆಯಾಗುತ್ತಿದೆ ಎಂದರು.

ಇದನ್ನೂ ಓದಿ: ಕೆ‌‌.ಸಿ.ವೀರೇಂದ್ರ ಪಪ್ಪಿ ಕುಟುಂಬದ ಮತ್ತೊಬ್ಬರು ಪಧವೀಧರ ಕ್ಷೇತ್ರಕ್ಕೆ ಟಿಕೆಟ್ ಆಕಾಂಕ್ಷಿ
ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗರಾಜು, ಉಪಾಧ್ಯಕ್ಷೆ ಶಶಿಕಲಾ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಎಚ್.ಆಂಜನೇಯ, ಗ್ರಾಮದ ಮುಖಂಡರಾದ ಸಾಣೀಕೆರೆಮಂಜು, ಎನ್.ಮಂಜುನಾಥ, ವೀರಣ್ಣ, ತಿಪ್ಪೇರುದ್ರಪ್ಪ, ಮಹಲಿಂಗಪ್ಪ, ಬೆಸ್ಕಾಂ ಎಇಇ ರಾಜು, ಕೃಷಿ ಅಧಿಕಾರಿ ಅಶೋಕ್, ತೋಟಗಾರಿಕೆ ಅಧಿಕಾರಿ ವಿರೂಪಾಕ್ಷಪ್ಪ, ಕಾರ್ಮಿಕ ಅಧಿಕಾರಿ ಕುಸುಮಾ, ಪಶುವೈದ್ಯಾಧಿಕಾರಿ ಡಾ.ರೇವಣ್ಣ, ಬ ಕೆ.ಎಸ್.ಸುರೇಶ್, ಎಇಒ ಸಂತೋಷ್, ವೈದ್ಯಾಧಿಕಾರಿ ಡಾ.ನಾಗರಾಜು, ಅಕ್ಷರ ದಾಸೋಹ ಅಧಿಕಾರಿ ತಿಪ್ಪೇಸ್ವಾಮಿ, ಸಿಆರ್‌ಪಿ ಗಿರೀಶ್, ಕಂದಾಯಾಧಿಕಾರಿ ಲಿಂಗೇಗೌಡ, ಗ್ರಾಮಲೆಕ್ಕಾಧಿಕಾರಿ ಕೇಶವಚಾರ್, ಪಿಡಿಒ ದೇವರಾಜ ಮುಂತಾದವರು ಉಪಸ್ಥಿತರಿದ್ದರು.

ಇದನ್ನೂ ಓದಿ: ಬಿಗ್ ಬಾಸ್ ಶೋ ಗೆ ಸಂಭಾವ್ಯ 10 ಜನರ ಪಟ್ಟಿ 

 

[t4b-ticker]

You May Also Like

More From Author

+ There are no comments

Add yours