ವಾಲ್ಮೀಕಿ ನೌಕರರ ಸಂಘದಿಂದ ನಾಳೆ ಸಾಧಕರಿಗೆ ಸನ್ಮಾನ ಮತ್ತು ಪ್ರತಿಭಾ ಪುರಸ್ಕಾರ

 

 

 

 

ಚಿತ್ರದುರ್ಗ🙁 Chitradurga) ಚಿತ್ರದುರ್ಗ ವಾಲ್ಮೀಕಿ ನಾಯಕ ನೌಕರರ ಕ್ಷೇಮಾಭಿವೃದ್ಧಿ ಮತ್ತು ಸಾಂಸ್ಕøತಿಕ ಸಂಘದ ವತಿಯಿಂದ ಇದೇ ಡಿಸೆಂಬರ್ 24ರಂದು ಬೆಳಿಗ್ಗೆ 10.30ಕ್ಕೆ ಚಿತ್ರದುರ್ಗ ನಗರದ ತರಾಸು ರಂಗಮಂದಿರದಲ್ಲಿ ಚಿತ್ರದುರ್ಗ ವಾಲ್ಮೀಕಿ ನಾಯಕ ನೌಕರರ ಸಮಾವೇಶ ಹಾಗೂ ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ  ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ವಾಲ್ಮೀಕಿ   (valamiki) ನಾಯಕ ನೌಕರರ ಕ್ಷೇಮಾಭಿವೃದ್ಧಿ ಮತ್ತು ಸಾಂಸ್ಕøತಿಕ ಸಂಘದ ಅಧ್ಯಕ್ಷ ಡಾ.ಹೆಚ್.ಗುಡ್ಡದೇಶ್ವರಪ್ಪ ಹೇಳಿದರು.

ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಾಲ್ಮೀಕಿ ನಾಯಕ ನೌಕರರ ಕ್ಷೇಮಾಭಿವೃದ್ಧಿ ಮತ್ತು ಸಾಂಸ್ಕøತಿಕ ಸಂಘದ ವತಿಯಿಂದ ಕಳೆದ 12 ವರ್ಷಗಳಿಂದ ಸಮಾಜದ ಸಾಧಕರನ್ನು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ, ಪ್ರೋತ್ಸಾಹಿಸಿ ಕೆಲಸವನ್ನು ನಿರಂತರವಾಗಿ ಮಾಡಿಕೊಂಡು ಬರಲಾಗುತ್ತಿದೆ ಎಂದು ಮಾಹಿತಿ ನೀಡಿದರು.

2022-23ನೇ ಸಾಲಿನಲ್ಲಿ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ, ಬಿಎ, ಬಿಕಾಂ, ಬಿಎಸ್ಸಿ, ಬಿಸಿಎ, ಬಿಎಸ್‍ಡಬ್ಲ್ಯೂ, ಇಂಜಿನಿಯರಿಂಗ್, ಎಂಬಿಬಿಎಸ್, ಇತರೆ ಪದವಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ಪಿಹೆಚ್‍ಡಿ ಪದವಿ ಪಡೆದ, ನಾಯಕ ಸಮಾಜದ ಪ್ರತಿಭಾವಂತರನ್ನು ಅಭಿನಂದಿಸಲು ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿತ್ತು. ಸುಮಾರು 200ಕ್ಕೂ ಹೆಚ್ಚು ಅರ್ಜಿಗಳು ಬಂದಿದ್ದವು. ಇದರಲ್ಲಿ 96 ಜನ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದು ತಿಳಿಸಿದ ಅವರು, ಮಾಜಿ ಸಂಸದರು ಹಾಗೂ ವಿಶ್ರಾಂತ ಹೈಕೋರ್ಟ್ ನ್ಯಾಯಮೂರ್ತಿ ಎನ್.ವೈ.ಹನುಮಂತಪ್ಪ ಅವರಿಗೆ 2013ನೇ ಸಾಲಿನ ಜೀವಮಾನ ಸಾಧನ ಪ್ರಶಸ್ತಿ ಪ್ರಧಾನ ಮಾಡಲಾಗುವುದು. ಇದರ ಜೊತೆಗೆ ಸಮಾಜದ ಸಾಧಕರಾದ ನಿವೃತ್ತ ಡಿಐಜಿ ಎಂ.ಎನ್.ನಾಗರಾಜ್, ಹಿರಿಯ ಪತ್ರಕರ್ತರು ಹಾಗೂ ಜಿಲ್ಲಾ ವಾಲ್ಮೀಕಿ ಪ್ರಶಸ್ತಿ ಪುರಸ್ಕೃತರಾದ ಹಿರಿಯ ಪತ್ರಕರ್ತರಾದ  ಎಂ.ಎನ್.ಅಹೋಬಲಪತಿ ಹಾಗೂ ಉದ್ಯಮಿ ಹಾಗೂ ಜಿಲ್ಲಾ ವಾಲ್ಮೀಕಿ ಪ್ರಶಸ್ತಿ ಪುರಸ್ಕøತ ಪಿ.ವಿ.ಅರುಣ್ ಕುಮಾರ್ ಅವರನ್ನು ಸನ್ಮಾನಿಸಲಾಗುವುದು ಎಂದರು.

 

 

ಕಾರ್ಯಕ್ರಮದಲ್ಲಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ದಿವ್ಯಸಾನಿಧ್ಯ ವಹಿಸುವರು. ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಉದ್ಘಾಟನೆ ನೆರವೇರಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಜೀವಮಾನ ಸಾಧನ ಪ್ರಶಸ್ತಿ ಪ್ರಧಾನ ಮಾಡುವರು. ಸಹಕಾರ ಸಚಿವ ಕೆ.ಎನ್.ರಾಜಣ್ಣ ವಾಲ್ಮೀಕಿ ಭಾವಚಿತ್ರ ಅನಾವರಣ ಮಾಡುವರು. ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ನಾಗೇಂದ್ರ ಸಮಾಜದ ಸಾಧಕರಿಗೆ ಸನ್ಮಾನ ಮಾಡುವರು. ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಜನಪ್ರತಿನಿಧಿಗಳು ಹಾಗೂ ಸಮಾಜದ ಗಣ್ಯರು ಪ್ರತಿಭಾ ಪುರಸ್ಕಾರ ನೀಡಿ ಗೌರವಿಸುವರು..

ಚಿತ್ರದುರ್ಗ ನಾಯಕ ಸಮಾಜದ ಅಧ್ಯಕ್ಷ ಬಿ.ಕಾಂತರಾಜು ಮಾತನಾಡಿ ಚಿತ್ರದುರ್ಗ ವಾಲ್ಮೀಕಿ ನಾಯಕ ನೌಕರರ ಸಮಾವೇಶ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭಕ್ಕೆ ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿಗೊಳಿಸಬೇಕು ಎಂದರು.

ಇದನ್ನೂ ಓದಿ: ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗೆ ಎಲ್ಲಾ ಫೈನಲ್

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ನಾಯಕ ಸಮಾಜದ ಅಧ್ಯಕ್ಷ ಹೆಚ್.ಜೆ.ಕೃಷ್ಣಮೂರ್ತಿ, ವಾಲ್ಮೀಕಿ ನಾಯಕ ನೌಕರರ ಕ್ಷೇಮಾಭಿವೃದ್ಧಿ ಮತ್ತು ಸಾಂಸ್ಕøತಿಕ ಸಂಘದ ಪ್ರಧಾನ ಕಾರ್ಯದರ್ಶಿ ಆರ್.ನಾಗೇಂದ್ರಬಾಬು, ಖಜಾಂಚಿ ಎಸ್.ಬಿ.ರವಿಶಂಕರ್, ಉಪಾಧ್ಯಕ್ಷ ಜೆ.ಎಸ್.ರವಿಕುಮಾರ್, ಜಂಟಿ ಕಾರ್ಯದರ್ಶಿಗಳಾದ ಕೆ.ನಾಗರಾಜ್, ಹೆಚ್.ತಿಪ್ಪಯ್ಯ ಹಾಗೂ ಸಹಾಯಕ ಅಭಿಯಂತರ ಬಸವರಾಜ ಟಿ.ಗೊರವರ್ ಇದ್ದರು.

[t4b-ticker]

You May Also Like

More From Author

+ There are no comments

Add yours