ಜನವರಿ 5 ರಂದು ಚಿತ್ರದುರ್ಗಕ್ಕೆ ಬಸವರಾಜ್ ಬೊಮ್ಮಾಯಿ

 

ಚಿತ್ರದುರ್ಗ ( ಕರ್ನಾಟಕ ವಾರ್ತೆ) ಜ.04: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜ.05 ರಂದು ಚಿತ್ರದುರ್ಗ ನಗರಕ್ಕೆ ಆಗಮಿಸಲಿದ್ದಾರೆ. ಬೆಂಗಳೂರಿನ ಹೆಚ್.ಎ.ಎಲ್. ವಿಮಾನ ನಿಲ್ದಾಣದಿಂದ ಬೆಳಿಗ್ಗೆ 11:30 ಹೆಲಿಕಾಪ್ಟರ್ ಮೂಲಕ ಹೊರಟು ಮಧ್ಯಾಹ್ನ 12:30ಕ್ಕೆ ನಗರ ಎಸ್.ಜೆ.ಎಂ. ಆಂಗ್ಲ ಮಾಧ್ಯಮ ಶಾಲೆ ಹೆಲಿಪ್ಯಾಡ್‌ಗೆ ಬಂದಿಳಿಯುವರು. ನಂತರ ಜಗದ್ಗುರು ಶ್ರೀ ಮಾಚಿದೇವ ಮಹಾಸಂಸ್ಥಾನ ಮಠದಲ್ಲಿ ಆಯೋಜಿಸಲಾಗಿರುವ ಕಾಯಕ ಜನೋತ್ಸವ ಹಾಗೂ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 3.15ಕ್ಕೆ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ಮರಳಲಿದ್ದಾರೆ.

[t4b-ticker]

You May Also Like

More From Author

+ There are no comments

Add yours