ಸಚಿವ ಸೋಮಣ್ಣ ಜೊತೆ ಚಿತ್ರದುರ್ಗ ಜಿಲ್ಲೆಯ ಬಿಜೆಪಿಯ ಹಾಲಿ ಶಾಸಕ ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ?

 

ರಾಜ್ಯದಲ್ಲಿ ರಾಜಕೀಯ ಪಕ್ಷಗಳ ಪಕ್ಷಾಂತರ ಪರ್ವ ಆರಂಭವಾಗಿದ್ದು ಕಾಂಗ್ರೆಸ್ ಕಡೆ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ,ಸಚಿವರು ವಾಲುತ್ತಿದ್ದು ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ ಹೆಚ್ಚಾಗುತ್ತಿದೆ.

 ಸಚಿವ  ವಿ.ಸೋಮಣ್ಣ, ಡಾ.ಕೆ.ಸಿ.ನಾರಾಯಣಗೌಡ, ಶಾಸಕರಾದ ಚಿತ್ರದುರ್ಗ ಜಿಲ್ಲೆ ಹಿರಿಯೂರಿನ ಪೂರ್ಣಿಮಾ, ಬೆಳಗಾವಿ ಜಿಲ್ಲೆಯ ಕಾಗವಾಡ ಕ್ಷೇತ್ರದ ಶ್ರೀಮಂತಪಾಟೀಲ್, ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್, ಮೊಳಕಾಲ್ಮೂರು ಕ್ಷೇತ್ರದ ಮಾಜಿ ಶಾಸಕ ಎನ್.ವೈ.ಗೋಪಾಲಕೃಷ್ಣ, ದೊಡ್ಡಬಳ್ಳಾಪುರದ ನರಸಿಂಹಸ್ವಾಮಿ ಸೇರಿದಂತೆ ಅನೇಕರು ಕಾಂಗ್ರೆಸ್ ಸೇರುವ ಸಾಧ್ಯತೆಗಳಿವೆ.

ಈಗಾಗಲೇ ಜೆಡಿಎಸ್‍ನಿಂದ ದೂರ ಉಳಿದು ಕಾಂಗ್ರೆಸ್ ಸೇರಲಿರುವ ಶಿವಲಿಂಗೇಗೌಡ, ಎ.ಟಿ.ರಾಮಸ್ವಾಮಿ, ಶ್ರೀನಿವಾಸಗೌಡ, ಎ.ಟಿ.ರಾಮಸ್ವಾಮಿ ಅವರ ಪಕ್ಷ ಸೇರ್ಪಡೆಗೆ ಸಮಯ ನಿಗದಿಯಾಗುವ ಸಾಧ್ಯತೆ ಇದೆ.

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಕ್ಷೇತ್ರದಲ್ಲಿ ಬಿಜೆಪಿ ಶಾಸಕರು, ಸಂಪುಟದಲ್ಲಿ ಯುವಜನಸೇವೆ ಮತ್ತು ಕ್ರೀಡಾ ಸಚಿವರಾಗಿರುವ ಡಾ.ಕೆ.ಸಿ.ನಾರಾಯಣಗೌಡರು ಕಾಂಗ್ರೆಸ್ ಸೇರ್ಪಡೆಗೆ ಬಹುತೇಕ ವೇದಿಕೆ ಸಜ್ಜುಗೊಂಡಿದೆ. ನಿನ್ನೆ ರಾತ್ರಿ ಕೆ.ಆರ್.ಪೇಟೆ ಕ್ಷೇತ್ರದ ಮಾಜಿ ಶಾಸಕ ಚಂದ್ರಶೇಖರ್ ಅವರ ಜೊತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತುಕತೆ ನಡೆಸಿ ಸಂಧಾನ ನಡೆಸಿದ್ದಾರೆ ಎನ್ನಲಾಗಿದೆ.

ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನವಾಗಲು ಕಾರಣವಾದ 14 ಮಂದಿ ಕಾಂಗ್ರೆಸ್ ಮತ್ತು ಜೆಡಿಎಸ್‍ನ ಮೂವರು ವಲಸಿಗ ಶಾಸಕರ ಪೈಕಿ ನಾಲ್ಕು ಮಂದಿ ಕಾಂಗ್ರೆಸ್ ಬಾಗಿಲಲ್ಲಿ ನಿಂತಿದ್ದಾರೆ. ಇವರಲ್ಲಿ ಸಂಪುಟದಲ್ಲಿ ಪ್ರಭಾವಿಗಳಾಗಿರುವ ಸಚಿವರ ಹೆಸರು ಇವೆ ಎಂದು ಹೇಳಲಾಗಿದೆ. ವಲಸಿಗರ ಸೇರ್ಪಡೆ ಕುರಿತು ಇಂದು ಸಂಜೆ ಮಹತ್ವದ ಬೆಳವಣಿಗೆ ನಡೆಯಲಿದೆ. ಸ್ಪಷ್ಟ ಚಿತ್ರಣ ದೊರೆಯಲಿದೆ ಎಂದು ಹೇಳಲಾಗಿದೆ.

[t4b-ticker]

You May Also Like

More From Author

+ There are no comments

Add yours