ಏಪ್ರಿಲ್ 15 ರಿಂದ 30 ರವರೆಗೆ ಅನ್ ಲೈನ್ ಉದ್ಯೋಗ ಮೇಳ

 

ಮೈಸೂರು : ಕೆಲಸ ಹುಡುಕುತ್ತಿರುವ ಪದವೀಧರರಿಗೆ ಗುಡ್ ನ್ಯೂಸ್ , ಕರ್ನಾಟಕ ರಾಜ್ಯ ಮುಕ್ತ ವಿವಿ ಏ.15 ರಿಂದ 30 ರವರೆಗೆ ಆನ್ ಲೈನ್ ಉದ್ಯೋಗ ಮೇಳ ಆಯೋಜನೆ ಮಾಡಿದ್ದು, ಆಸಕ್ತರು ಭಾಗಿಯಾಗಬಹುದಾಗಿದೆ.

ಈ ಕುರಿತು ಕರ್ನಾಟಕ ರಾಜ್ಯ ಮುಕ್ತ ಕುಲಪತಿ ಪ್ರೊ ಶರಣಪ್ಪ ವಿ ಹಲಸೆ ಮಾಹಿತಿ ನೀಡಿದ್ದು, ಈ ಉದ್ಯೋಗ ಮೇಳದಲ್ಲಿ 10 ಕ್ಕೂ ಹೆಚ್ಚು ಕಂಪನಿಗಳು ಭಾಗಿಯಾಗಲಿದೆ, 2000 ಕ್ಕೂ ಹೆಚ್ಚು ಉದ್ಯೋಗ ಸಿಗಲಿದೆ ಎಂದು ಮಾಹಿತಿ ನೀಡಿದ್ದಾರೆ.

ಬಿ,ಕಾ , ಎಂಕಾಂ, ಎಂಬಿಎ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದ್ದು, ಆಸಕ್ತರು ಮೊಬೈಲ್ ನಲ್ಲಿ ಪ್ರೊಪ್ರೈಲ್ ಇನ್ ಅಪ್ಲಿಕೇಶನ್ ಡೌನ್ ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದು. ದಾಖಲೆಗಳನ್ನು ಪರಿಶೀಲಿಸಿ ಅರ್ಹರಿಗೆ ಸಂದರ್ಶನ ನಡೆಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ 9513373737 ಸಂಪರ್ಕಿಸಬಹುದಾಗಿದೆ ಎಂದು ಪ್ರೊಫೈಲ್ ಇನ್ ಕಂಪನಿ ಮಾಹಿತಿ ನೀಡಿದೆ.

ಉದ್ಯೋಗಾಂಕ್ಷಿಗಳೇ ಗಮನಿಸಿ : ಶಿವಮೊಗ್ಗದಲ್ಲಿ ನಾಳೆ ವಿವಿಧ ಕಂಪನಿಗಳಿಂದ ನೇರ ಸಂದರ್ಶನ

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಏ.12 ರ ಬೆಳಗ್ಗೆ 10.00ಕ್ಕೆ ಪತ್ರಿಷ್ಠಿತ ಖಾಸಗಿ ಕಂಪನಿಗಳಿಂದ ನೇರ ಸಂದರ್ಶನವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ.
ವಿವಿಧ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್‌ಎಸ್‌ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮಾ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ

ಭಾಗವಹಿಸಬಹುದು. ಉಚಿತ ಪ್ರವೇಶ ಇರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಶಿವಮೊಗ್ಗ ಇವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ : 08182-255293, 9380663606 ಮತ್ತು 9482023412, 9535312531 ಮೂಲಕ ಸಂಪರ್ಕಿಸುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

[t4b-ticker]

You May Also Like

More From Author

+ There are no comments

Add yours