ಜನವರಿ 28 ರಂದು ಚಿತ್ರದುರ್ಗದಲ್ಲಿ ಶೋಷಿತರ ಸಮಾವೇಶ ಆಯೋಜನೆ

 

ಹೊಸದುರ್ಗ: ಕಾಂತರಾಜು ವರದಿಯನ್ನು ರಾಜ್ಯ ಸರ್ಕಾರ ಕೂಡಲೇ ಸ್ವೀಕರಿಸಿ, ಜಾರಿಗೊಳಿಸಬೇಕು. ಕರ್ನಾಟಕ ಶೋಷಿತ ಸಮುದಾಯಗಳ ಮತ್ತು ಹಿಂದುಳಿದ ಜಾತಿಗಳ ಸಮಸ್ಯೆಗಳನ್ನು ಆಲಿಸಿ, ಸಮಾನ ಅವಕಾಶಗಳನ್ನು ಕಲ್ಪಿಸಬೇಕೆಂದು ಒತ್ತಾಯಿಸಲು ಇದೇ ಜ. 28ರಂದು ಚಿತ್ರದುರ್ಗ ನಗರದ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಗುರುಪೀಠದ ಪಕ್ಕದ ಮೈದಾನದಲ್ಲಿ ಶೋಷಿತರ ಜಾಗೃತಿಗಾಗಿ ರಾಜ್ಯ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ರಾಜ್ಯ ಸಂಚಾಲಕ ಜಗದೀಶ್ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ನೇತೃತ್ವವಹಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಈ ಕೂಡಲೇ ಕಾಂತರಾಜು ವರದಿಯನ್ನು ಸ್ವೀಕರಿಸಿ, ಸಾರ್ವಜನಿಕರ ಚರ್ಚೆಗೆ ಬಿಟ್ಟು, ವರದಿಯನ್ನು ಅಂಗೀಕರಿಸಿ ಜಾರಿಗೊಳಿಸಬೇಕು. ಕೇಂದ್ರ ಸರ್ಕಾರವು ಜಾತಿವಾರು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಮಾಡಿಸಬೇಕು. ಇಡಬ್ಲ್ಯೂ ಎಸ್ ಶೇ.10ರಷ್ಟು ಮೀಸಲಾತಿಯನ್ನು ರದ್ದುಪಡಿಸುವಂತೆ ಒತ್ತಾಯಿಸುತ್ತದೆ. ಮಹಿಳಾ ಮೀಸಲಾತಿ ಕಾಯ್ದೆಯನ್ನು ಕೂಡಲೇ ಜಾರಿ ಮಾಡಬೇಕು. ರಾಜಕೀಯ ಕ್ಷೇತ್ರದಲ್ಲೂ ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಮಹಿಳೆಯರಿಗೆ ಮೀಸಲಾತಿಯನ್ನು ಕಲ್ಪಿಸಬೇಕೆಂದು ಆಗ್ರಹಿಸಿದರು.
ರಾಜಕೀಯ ಮೀಸಲಾತಿಯನ್ನು ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಹಿಂದುಳಿದ ಜಾತಿಗಳಿಗೆ ಮತ್ತು ಅಲ್ಪಸಂಖ್ಯಾತರಿಗೆ ಅವಕಾಶ ಕಲ್ಪಿಸಬೇಕು. ಪರಿಶಿಷ್ಟ ಜಾತಿ, ಪಂಗಡ ಮತ್ತು ಅಲ್ಪಸಂಖ್ಯಾತರ ಜನಸಂಖ್ಯೆಗೆ ಅನುಗುಣವಾಗಿ ಶೇಕಡವಾರು ಪ್ರಮಾಣದಲ್ಲಿ ಮೀಸಲಾತಿ ಹೆಚ್ಚಿಸಬೇಕು.
ಖಾಸಗಿ ಕ್ಷೇತ್ರಕ್ಕೂ ಮೀಸಲಾತಿಯನ್ನು ವಿಸ್ತರಿಸಬೇಕು. ಮುಸ್ಲಿಂ ಸಮುದಾಯದ ಸಾಮಾಜಿಕ ಮತ್ತು ಶೈಕ್ಷಣಿಕ, ಆರ್ಥಿಕ ಸಬಲೀಕರಣಕ್ಕೆ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ರಾಜೇಂದ್ರ ಸಾಚಾರ್ ಸಲ್ಲಿಸಿರುವ ವರದಿಯನ್ನು ಕೂಡಲೇ ಅನುಷ್ಠಾನಗೊಳಿಸಬೇಕೆಂದು ಒತ್ತಾಯಿಸಲು ಸಮಾವೇಶವನ್ನು ರೂಪಿಸಲಾಗಿದೆ ಎಂದು ಹೇಳಿದರು.
  ಈ ವೇಳೆ ಸಭೆಯಲ್ಲಿ ಮುಖಂಡರಾದ ಕೃಷ್ಣಮೂರ್ತಿ, ಮಂಜಪ್ಪ, ರಾಮಚಂದ್ರಪ್ಪ, ಅಲ್ತಾಫ್ ಪಾಷಾ, ಕಾರೇಹಳ್ಳಿ ಬಸವರಾಜ್, ಎಂ.ಪಿ ಶಂಕರ್, ನಾಗೇನಹಳ್ಳಿ ಮಂಜುನಾಥ್, ಅಜ್ಜಪ್ಪ ಮತ್ತು ತುಂಬಿನಕೆರೆ ಬಸವರಾಜ್ ಸೇರಿದಂತೆ ಹಲವರಿದ್ದರು.
*ಕೋಟ್ ಹಾಕಿ.1*
 ಇದೇ ತಿಂಗಳ ಜನವರಿ 28ರಂದು ಚಿತ್ರದುರ್ಗ ನಗರದ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಗುರು ಪೀಠದ ಪಕ್ಕದ ಮೈದಾನದಲ್ಲಿ ಸಂವಿಧಾನ, ಸಾಮಾಜಿಕ ನ್ಯಾಯ, ಸಹಬಾಳ್ವೆ ಮತ್ತು ಸ್ವಾಭಿಮಾನದ ಸಂರಕ್ಷಣೆಗಾಗಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಮತ್ತು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಇವರ ಸಂಯುಕ್ತಾಶ್ರಯದಲ್ಲಿ ಶೋಷಿತರ ಜಾಗೃತಿಗಾಗಿ ರಾಜ್ಯಮಟ್ಟದ ಸಮಾವೇಶವನ್ನು ರೂಪಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದ ಶೋಷಿತ ಸಮುದಾಯಗಳ ಸಚಿವರು, ಶಾಸಕರು, ಮುಖಂಡರು ಮತ್ತು ಒಂದು ಲಕ್ಷಕ್ಕೂ ಅಧಿಕ ಜನರು ಪಾಲ್ಗೊಳ್ಳಲಿದ್ದಾರೆ.
ಜಗದೀಶ್.
ಸಂಚಾಲಕರು,
ಶೋಷಿತರ ಜಾಗೃತಿಗಾಗಿ ರಾಜ್ಯ ಸಮಾವೇಶ
——————————
*ಕೋಟ್ ಹಾಕಿ.2*
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಮ್ಮ ಬೇಡಿಕೆಗಳನ್ನು ಶೀಘ್ರವೇ ಈಡೇರಿಸಬೇಕೆಂದು ಒತ್ತಾಯಿಸಲು, ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗ, ಅಲ್ಪಸಂಖ್ಯಾತ ಮತ್ತು ಅಸಂಘಟಿತ ಶೋಷಿತ ಸಮುದಾಯಗಳು ಸಂಘಟಿತರಾಗಬೇಕಾದ ಅನಿವಾರ್ಯತೆ ಇದೆ. ಎಲ್ಲಾ ಶೋಷಿತ ಸಮುದಾಯಗಳಿಗೆ “ಮಾಡು ಇಲ್ಲವೇ ಮಡಿ” ಎಂಬ ಸ್ಥಿತಿ ಉಂಟಾಗಿದೆ. ನಮ್ಮ ಹಕ್ಕುಗಳ ರಕ್ಷಣೆಗಾಗಿ ಐಕ್ಯತೆಯಿಂದ ಜಾಗೃತಿ ಹೊಂದಿ ಹೋರಾಟ ರೂಪಿಸಬೇಕಾಗಿದೆ. ಈ ಹಿನ್ನಲೆಯಲ್ಲಿ ನಾಡಿನಲ್ಲಿ ಒಂದು ಐತಿಹಾಸಿಕ ಶೋಷಿತ ಸಮುದಾಯಗಳ ಜಾಗೃತಿಗಾಗಿ ರಾಜ್ಯಮಟ್ಟದ ಸಮಾವೇಶವನ್ನು ರೂಪಿಸಲಾಗಿದೆ.
ಮಧುರೆ ನಟರಾಜ್.
ಮುಖಂಡರು,
ಹೊಸದುರ್ಗ ತಾಲ್ಲೂಕು ಉಪ್ಪಾರ ಸಮಾಜ.
[t4b-ticker]

You May Also Like

More From Author

+ There are no comments

Add yours