ಕಾರ್ಮಿಕರಿಗೆ ಮತದಾನ ದಿನದಂದು ವೇತನ ಸಹಿತ ರಜೆ

 

 

 

ಚಿತ್ರದುರ್ಗ(ಕರ್ನಾಟಕ ವಾರ್ತೆ)ಮೇ.5:
ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಇದೇ ಮೇ 10ರಂದು ಮತದಾನ ನಡೆಯಲಿದ್ದು, ಮತದಾನ ದಿನದಂದು ಜಿಲ್ಲೆಯಾದ್ಯಂತ ಎಲ್ಲಾ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ 1951ರ ಪ್ರಜಾಪ್ರತಿನಿಧಿ ಕಾಯ್ದೆ ಸೆಕ್ಷನ್ 135(ಬಿ)ರಡಿ ಹಾಗೂ ಕೈಗಾರಿಕಾ ಸಂಸ್ಥೆಗಳ (ರಾಷ್ಟ್ರೀಯ ಮತ್ತು ಹಬ್ಬದ ರಜೆಗಳು) ಕಾಯ್ದೆ-1963 ಕಲಂ-3(ಎ)ರನ್ವಯ ಅರ್ಹ ಮತದಾರರಿಗೆ ವೇತನ ಸಹಿತ ರಜೆ ಘೋಷಿಸಿ ಸಂವಿಧಾನಾತ್ಮಕ ಹಕ್ಕಾದ ಮತವನ್ನು ಚಲಾಯಿಸುವುದಕ್ಕಾಗಿ ಎಲ್ಲಾ ಮಾಲೀಕರು, ನಿಯೋಜಕರು ಅನುವು ಮಾಡಿಕೊಡಬೇಕಾಗಿರುತ್ತದೆ.
ಆದ್ದರಿಂದ ಚುನಾವಣೆ ನಡೆಯುವ ಕ್ಷೇತ್ರಗಳ ವ್ಯಾಪ್ತಿಯ ಎಲ್ಲಾ ಕಾರ್ಖಾನೆಗಳು ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಮಾಲೀಕರು ಮತದಾನ ದಿನದಂದು ಕಾಯ್ದೆಯನ್ವಯ ಎಲ್ಲಾ ಕಾರ್ಮಿಕರು ಮತದಾನ ಮಾಡಲು ಅನುಕೂಲವಾಗುವಂತೆ ವೇತನ ಸಹಿತ ರಜೆ ನೀಡುವಂತೆ ಈ ಮೂಲಕ ತಿಳಿಸಲಾಗಿದೆ.
ತಪ್ಪಿದಲ್ಲಿ ಸಂಬಂಧಪಟ್ಟ ಸಂಸ್ಥೆಯ ಮಾಲೀಕರು, ನಿಯೋಜಕರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಚಿತ್ರದುರ್ಗ ಕಾರ್ಮಿಕ ಅಧಿಕಾರಿ ಸಿ.ಎನ್.ಯಶೋಧರ ತಿಳಿಸಿದ್ದಾರೆ.
=========

[t4b-ticker]

You May Also Like

More From Author

+ There are no comments

Add yours