175 ಮನೆಗಳ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಟಿ.ರಘುಮೂರ್ತಿ

 

ಇಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ  ಶಾಸಕರಾದ ಶ್ರೀ ಟಿ ರಘುಮೂರ್ತಿ ರವರು ಚಳ್ಳಕೆರೆ ನಗರದ ಅಭಿಷೇಕ್ ನಗರದಲ್ಲಿ ನೂತನವಾಗಿ ಪ್ರಾರಂಭವಾಗಲಿರುವ 175 ಮನೆಗಳ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ಚಳ್ಳಕೆರೆ ನಗರದ ಅಭಿಷೇಕ್ ನಗರದಲ್ಲಿ ಬಾಬು ಜಗಜೀವನ್ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ರಾಜೀವ್ ಗಾಂಧಿ ವಸತಿ ಯೋಜನೆಯಡಿ 9.00 ಕೋಟಿ ರೂಪಾಯಿ ವೆಚ್ಚದಲ್ಲಿ ಪ್ರಾರಂಭವಾಗಲಿರುವ 175 ಮನೆಗಳ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ವ್ಯವಸ್ಥಾಪಕ ನಿರ್ದೇಶಕರಾದ ಗಂಗಾಧರ, ಪೌರಾಯುಕ್ತರಾದ ಚಂದ್ರಪ್ಪ, ನಗರಸಭೆ ಅಧ್ಯಕ್ಷರಾದ ಶ್ರೀಮತಿ ಸುಮಕ್ಕ ಆಂಜನೇಯ, ಉಪಾಧ್ಯಕ್ಷರಾದ ಶ್ರೀಮತಿ ಮಂಜುಳಾ ಪ್ರಸನ್ನ ಕುಮಾರ್ , ನಗರಸಭೆ ಸದಸ್ಯರುಗಳಾದ ಶ್ರೀಮತಿ ಸುಮಾ ಭರಮಣ್ಣ, ಮಲ್ಲಿಕಾರ್ಜುನ, ವೀರಭದ್ರಪ್ಪ, ಮುಖಂಡರುಗಳಾದ ಕೃಷ್ಣಮೂರ್ತಿ, ಭೀಮನಕೆರೆ ಶಿವಮೂರ್ತಿ , ಬೋರಣ್ಣ, ಹೊನ್ನೂರ್ ಸ್ವಾಮಿ ಮತ್ತು ಮುಖಂಡರು ,ಕಾರ್ಯಕರ್ತರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

[t4b-ticker]

You May Also Like

More From Author

+ There are no comments

Add yours