ಚುನಾವಣಾ ಕರ್ತವ್ಯ ಜವಾಬ್ದಾರಿಯುತವಾಗಿ ನಿರ್ವಹಿಸಿ: ಸಿಇಓ ಎಂ.ಎಸ್.ದಿವಾಕರ್

 

ಚಿತ್ರದುರ್ಗ(ಕರ್ನಾಟಕ ವಾರ್ತೆ)ಫೆ.16:
ಮುಂಬರುವ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ತಮಗೆ ವಹಿಸುವ ಕರ್ತವ್ಯಗಳನ್ನು ಜವಾಬ್ದಾರಿಯುತವಾಗಿ ನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್.ದಿವಾಕರ ತಿಳಿಸಿದರು.
ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾಧಿಕಾರಿಗಳು, ಮುಖ್ಯ ಲೆಕ್ಕಾಧಿಕಾರಿಗಳು ಹಾಗೂ ಚುನಾವಣಾ ತರಬೇತಿ ನಿರ್ವಹಣಾ ಕೋಶದ ಸಂಯುಕ್ತಾಶ್ರಯದಲ್ಲಿ ನಡೆದ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ ಮಾದರಿ ಚುನಾವಣಾ ನೀತಿ ಸಂಹಿತೆ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಗಳು ಹಬ್ಬವಿದ್ದಂತೆ ಇವುಗಳನ್ನು ಸಂಭ್ರಮಿಸಬೇಕು. ಚುನಾವಣೆಗಳಿಂದ ವಿವಿಧ ಇಲಾಖೆಗಳ ನೌಕರರು ಭಾಗವಹಿಸುವುದರಿಂದ ಸಂಬಂಧಗಳು ಉತ್ತಮಗೊಳ್ಳುತ್ತವೆ. ಚುನಾವಣೆಯಲ್ಲಿ ನಿಮ್ಮ ಕರ್ತವ್ಯಗಳನ್ನು ಜವಾಬ್ದಾರಿಯುತವಾಗಿ ನಿರ್ವಹಿಸಬೇಕು ಎಂದು ಹೇಳಿದರು.
ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ ಮಾತನಾಡಿ, ಚುನಾವಣಾ ಕೆಲಸಗಳನ್ನು ಪ್ರೀತಿಸಬೇಕು ಮತ್ತು ತಂಡದ ರೂಪದಲ್ಲಿ ನಿರ್ವಹಿಸಬೇಕು. ಯಾವುದೇ ಪಕ್ಷದ ಪರ ಕಾರ್ಯನಿರ್ವಹಿಸಬಾರದು ಎಂದು ತಿಳಿಸಿದರು.
ಹಿರಿಯೂರು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ನಾಗಭೂಷಣ್ ಅವರು ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಡಾ.ರಂಗಸ್ವಾಮಿ, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಎನ್.ರಾಜು, ಡಯಟ್ ಹಿರಿಯ ಉಪನ್ಯಾಸಕ ಅಯುಬ್ ಸೊರಬ, ಎಲ್ಲಾ ವಿಧಾನ ಸಭಾ ಕ್ಷೇತ್ರದ ಚುನಾವಣಾ ಅಧಿಕಾರಿಗಳು, ಜಿಲ್ಲಾ ಚುನಾವಣಾ ತರಬೇತಿ ನಿರ್ವಹಣಾ ಕೋಶದ ನೋಡಲ್ ಅಧಿಕಾರಿಗಳು, ಜಿಲ್ಲೆ ಹಾಗೂ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಜಿಲ್ಲಾ ಎಸ್‍ಎಸ್‍ಟಿ (ಸ್ಯಾಟಿಕ್ ಸರ್ವೆಲೆನ್ಸ್ ಟೀಂ) ಎಫ್‍ಎಸ್‍ಟಿ (ಪ್ಲೈಯಿಂಗ್ ಸ್ಕ್ವಾಡ್) ತಂಡದವರು ಭಾಗವಹಿಸಿದ್ದರು.
[t4b-ticker]

You May Also Like

More From Author

+ There are no comments

Add yours