ಕೆ.ಆರ್.ಮಂಜುನಾಥ್‍ಗೆ ಪಿಹೆಚ್‍ಡಿ ಪದವಿ

 

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜ.13:
ದಾವಣಗೆರೆ ತಾಲ್ಲೂಕಿನ ಕುರ್ಕಿ ಗ್ರಾಮದ ವಾಸಿಯಾದ ಕೆ. ರೇವಣಸಿದ್ದಾಚಾರಿ ಹಾಗೂ ಶಶಿಕಲಾ ದಂಪತಿಗಳ ಮಗನಾದ ಕೆ.ಆರ್.ಮಂಜುನಾಥ ಇವರು ಹಂಪಿ ಕನ್ನಡ ವಿಶ್ವವಿದ್ಯಾಲಯದ ಶಾಸನಶಾಸ್ತ್ರ ವಿಭಾಗದಲ್ಲಿ ಡಾಕ್ಟರೇಟ್ ಪದವಿಗೆ ಭಾಜನರಾಗಿದ್ದಾರೆ.
ಹಂಪಿ ಕನ್ನಡ ವಿಶ್ವವಿದ್ಯಾಲಯದ ಬುಡಕಟ್ಟು ಅಧ್ಯಯನ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಡಾ.ಎ.ಎಸ್.ಪ್ರಭಾಕರ ಇವರ ಮಾರ್ಗದರ್ಶನದಲ್ಲಿ “ಕಲ್ಯಾಣ ಚಾಲುಕ್ಯರ ಆಡಳಿತದಲ್ಲಿ ಮಾಂಡಳಿಕರು” ಎಂಬ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ ದೊರೆತಿದೆ.

ಇದನ್ನೂ ಓದಿ:ಮನೆ ಕಾಪೌಂಡನಲ್ಲಿ ಗಾಂಜಾ ಗಿಡ | ಅಧಿಕಾರಿ ಭೇಟಿ |ಆರೋಪಿ ಪರಾರಿ
ಕನ್ನಡ ವಿಶ್ವವಿದ್ಯಾಲಯದ 32ನೇ ಘಟಿಕೋತ್ಸವದಲ್ಲಿ ಕುಲಪತಿಗಳಾದ ಡಾ.ಡಿ.ವಿ. ಪರಮಶಿವಮೂರ್ತಿ, ಕುಲಸಚಿವರಾದ ಡಾ. ವಿಜಯ್ ಪೂಣಚ್ಚ ತಂಬಂಡ, ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ.ಸುಧಾಕರ್ ಪದವಿ ಪ್ರಧಾನ ಮಾಡಿದ್ದಾರೆ.

[t4b-ticker]

You May Also Like

More From Author

+ There are no comments

Add yours