ಶಿಕ್ಷಣದ ಜೊತೆ ಜೊತೆಯಲ್ಲಿ ದೈಹಿಕ ಶಿಕ್ಷಣವನ್ನೂ ಸಹ ಅಳವಡಿಸಿಕೊಳ್ಳಬೇಕು

 

ಚಳ್ಳಕೆರೆ-30:  ಶಿಕ್ಷಕರು ಮತ್ತು ಇಲಾಖೆಯ ಎಲ್ಲಾ ಅಧಿಕಾರಿಗಳು ಈ ಎರಡೂ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಕಾಯೋನ್ಮುಖರಾಗಬೇಕೆಂದು ಮಂಜುನಾಥ ತಿಳಿಸಿದರು.

ಅವರು, ಮಂಗಳವಾರ ನಗರದ ಹೊರವಲಯದ ನಿರ್ಮಲ ಕನ್ವೆನ್ಷನ್ ಹಾಲ್‍ನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರಥ ಇಲಾಖೆ, ದೈಹಿಕ ಶಿಕ್ಷಕರ ಸಂಘದ ಸಹಯೋಗದಲ್ಲಿ ತಾಲ್ಲೂಕು ಮಟ್ಟದ ಪ್ರಾಥಮಿಕ, ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಕ್ರೀಡಾಕೂಟಗಳನ್ನು ಏರ್ಪಡಿಸಲು ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.
ಜುಲೈ ಅಂತ್ಯದೊಳಗೆ ಪ್ರಾಥಮಿಕ, ಆಗಸ್ಟ್ ಅಂತ್ಯದೊಳಗೆ ಪ್ರೌಢಶಾಲೆ ತಾಲ್ಲೂಕು ಮಟ್ಟದ ಎಲ್ಲಾ ಕ್ರೀಡಾಕೂಟಗಳನ್ನು ಅಂತ್ಯಗೊಳಿಸಬೇಕು. ಪ್ರತಿಯೊಂದು ಕ್ರೀಡಾಕೂಟದಲ್ಲೂ ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿರುತ್ತದೆ. ಹೆಚ್ಚಿನ ವಿವರಗಳಿಗೆ ತಾಲ್ಲೂಕು ಮಟ್ಟದ ದೈಹಿಕ ಶಿಕ್ಷಣ ಅಧಿಕಾರಿಯನ್ನು ಭೇಟಿ ಮಾಡಿ ಮಾಹಿತಿ ಪಡೆಯುವಂತೆ ಸೂಚನೆ ನೀಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ಸುರೇಶ್ ಮಾತನಾಡಿ, ಶಿಕ್ಷಣ ಶಿಕ್ಷಣದ ಜೊತೆ, ಜೊತೆಯಲ್ಲಿ ದೈಹಿಕ ಶಿಕ್ಷಣವನ್ನೂ ಸಹ ಅಳವಡಿಸಿಕೊಂಡಲ್ಲಿ ವಿದ್ಯಾರ್ಥಿಗಳಲ್ಲಿ ಕ್ರೀಡಾಸ್ಪೂರ್ತಿಯೊಂದಿಗೆ ಕಲಿಕೆಯಲ್ಲೂ ಸಹ ಆಸಕ್ತಿ ಹೆಚ್ಚಾಗುತ್ತದೆ. ಎಲ್ಲಾ ಹಂತದ ಕ್ರೀಡಾಕೂಟದಲ್ಲಿ ಮಕ್ಕಳ ಸಂರಕ್ಷಣೆಗೆ ಶಿಕ್ಷಕರು ಆದ್ಯತೆ ನೀಡಬೇಕಿದೆ. ತಾಲ್ಲೂಕು ಮಟ್ಟದ ಕ್ರೀಡಾ ಕೂಟವನ್ನು ಯಶಸ್ವಿಯಾಗಿ ನಡೆಸಲು ಎಲ್ಲರೂ ಇಲಾಖೆಯೊಂದಿಗೆ ಕೈಜೋಡಿಸುವಂತೆ ಅವರು ಮನವಿ ಮಾಡಿದರು.
ವೇದಿಕೆಯಲ್ಲಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಮಂಜುನಾಥ, ಪ್ರಧಾನ ಕಾರ್ಯದರ್ಶಿ ಪ್ರದೀಪ್, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಆರ್.ಮಾರುತೇಶ್ ಮುಂತಾದವರು ಉಪಸ್ಥಿತರಿದ್ದರು.

[t4b-ticker]

You May Also Like

More From Author

+ There are no comments

Add yours