ಬಂಟ್ವಾಳ, ಅ. 27: ಜಿಲ್ಲೆಯಲ್ಲಿ ಮಹಿಳೆಯರ ಸುರಕ್ಷತೆ, ಆರ್ಥಿಕ ಸ್ವಾವಲಂಬನೆ ಹಾಗೂ ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ‘ಪಿಂಕ್ ಎಲೆಕ್ಟ್ರಿಕ್ ಆಟೋರಿಕ್ಷಾ’ ಯೋಜನೆ ರಾಜ್ಯಾದ್ಯಂತ ಗಮನ ಸೆಳೆಯುತ್ತಿದೆ. ರೋಟರಿ ಇಂಟರ್ನ್ಯಾಷನಲ್ ಡಿಸ್ಟ್ರಿಕ್ಟ್ 3181 ಅತ್ಯಂತ ಮಹತ್ವಾಕಾಂಕ್ಷೆಯಿಂದ ಹಮ್ಮಿಕೊಂಡಿರುವ ‘ಸಖಿ’ ಯೋಜನೆಯಡಿ, ಮಹಿಳೆಯರಿಗಾಗಿಯೇ ಪ್ರತ್ಯೇಕವಾಗಿ ವಿನ್ಯಾಸಗೊಳಿಸಲಾದ ಈ ಸುಂದರ ಪಿಂಕ್ ಆಟೋಗಳು ಈಗ ಸುಳ್ಯ ಮತ್ತು ಬಂಟ್ವಾಳ ರಸ್ತೆಗಳಲ್ಲಿ ಸದ್ದು ಮಾಡುತ್ತಿವೆ. ಮಹಿಳೆಯರೇ ಚಲಾಯಿಸುವ ಈ ವಾಹನಗಳು ಸಾರ್ವಜನಿಕರಲ್ಲಿ ಸುರಕ್ಷಿತ ಪ್ರಯಾಣದ ಹೊಸ ಭರವಸೆಯನ್ನು ಮೂಡಿಸಿವೆ.



