ಕರ್ನಾಟಕ ಬಿಜೆಪಿಯಲ್ಲಿ ಮತ್ತೆ ನಾಯಕತ್ವ ಬದಲಾವಣೆ ಚರ್ಚೆ ಶುರುವಾಗಿದೆ. ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲೆಂದೇ ವಿಧಾನಪರಿಷತ್ ಚುನಾವಣೆಯಲ್ಲಿ ಕೆಲ ಬಿಜೆಪಿ ಶಾಸಕರು ಅಡ್ಡಮತದಾನ ಮಾಡಿ ವಿಜಯೇಂದ್ರ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ ಎನ್ನುವ ಆರೋಪಗಳು ಕೇಳಿಬರುತ್ತಿವೆ. ಇದರ ಮಧ್ಯೆ ಇದೀಗ ಮಾಜಿ ಸಿಎಂ ಡಿವಿ ಸದಾನಂದಗೌಡ ಅವರದ್ದು ಎನ್ನಲಾದ ಆಡಿಯೋ ವೈರಲ್ ಆಗಿದ್ದು, ಬಿಜೆಪಿಯಲ್ಲಿ ಅಲ್ಲೊಲ ಕಲ್ಲೋಲ ಸೃಷ್ಟಿಸಿದೆ. ಅಷ್ಟಕ್ಕೂ ಆಡಿಯೋನಲ್ಲಿ ಏನಿದೆ? ಈ ಬಗ್ಗೆ ಸದಾನಂದಗೌಡ ನೀಡಿದ ಸ್ಪಷ್ಟನೆ ಏನು ಎನ್ನುವ ಡಿಟೇಲ್ಸ್ ಇಲ್ಲಿದೆ.