ಹೊಸದಿಲ್ಲಿ: ದೆಹಲಿ ಕಾರು ಬಾಂಬ್ ಸ್ಪೋಟದ ಗಾಯಾಳುಗಳನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು (ನ.12) ಭೇಟಿ ಮಾಡಿ, ಆರೋಗ್ಯ ವಿಚಾರಿಸಿದ್ದಾರೆ.
ಭೂತಾನ್ ಪ್ರವಾಸ ಮುಗಿಸಿ ನವದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಮೋದಿ, ನೇರವಾಗಿ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಈ ವೇಳೆ ದು:ಖತಪ್ತ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಪ್ರಧಾನಿ ಮೋದಿ, ಬೇಗ ಗುಣಮುಖರಾಗುವಂತೆ ಹಾರೈಸಿದರು.









