ಪ್ರಧಾನಿ ನರೇಂದ್ರ ಮೋದಿ ಇಂದು ಬೆಂಗಳೂರಿಗೆ ಭೇಟಿ ನೀಡಲಿದ್ದು, ನಮ್ಮ ಮೆಟ್ರೋ ಪಿಂಕ್ ಲೈನ್ ಲೋಕಾರ್ಪಣೆ ಹಾಗೂ ₹15,600 ಕೋಟಿಗೂ ಅಧಿಕ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಮೋದಿ ಭೇಟಿ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಭದ್ರತೆ ಮತ್ತು ಸಂಚಾರ ಮಾರ್ಗಗಳಲ್ಲಿ ತಾತ್ಕಾಲಿಕ ಬದಲಾವಣೆ ಮಾಡಲಾಗಿದೆ.




ಬೆಳಗ್ಗೆ 10:05ಕ್ಕೆ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಮೋದಿ, ಪ್ರಶಾಂತಿ ಕುಟೀರಂ ಸುವರ್ಣ ಮಹೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ತಾವರೆಕೆರೆ ಮೆಟ್ರೋ ನಿಲ್ದಾಣದಿಂದ ಐಐಎಂ ಬೆಂಗಳೂರು ನಿಲ್ದಾಣದವರೆಗೆ ನಮ್ಮ ಮೆಟ್ರೋದಲ್ಲಿ ಪ್ರಯಾಣಿಸಲಿದ್ದಾರೆ. ಈ ವೇಳೆ ಪಿಂಕ್ ಲೈನ್ ಲೋಕಾರ್ಪಣೆ ಸೇರಿದಂತೆ ₹15,600 ಕೋಟಿಗೂ ಅಧಿಕ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಎಸ್ಪಿಜಿ ಹಾಗೂ ಪೊಲೀಸ್ ಇಲಾಖೆ ಬಿಗಿ ಭದ್ರತೆ ಕೈಗೊಂಡಿವೆ. ಸಾರ್ವಜನಿಕರಿಗೆ ತೊಂದರೆಯಾಗದಂತೆ ತಾತ್ಕಾಲಿಕ ಬದಲಾವಣೆ ಮಾಡಲಾಗಿದೆ. ಸಂಜೆ ಮೈಸೂರಿನಿಂದ ದೆಹಲಿಗೆ ವಾಪಸಾಗಲಿದ್ದಾರೆ.


