ಪಿ.ಎಂ ವಿಶ್ವಕರ್ಮ ಯೋಜನೆ ಸೌಲಭ್ಯ: ಅರ್ಜಿ ಆಹ್ವಾನ

 

ಚಿತ್ರದುರ್ಗ(ಕರ್ನಾಟಕ ವಾರ್ತೆ)ಅ.04:
ಗ್ರಾಮ, ನಗರ ಮಟ್ಟದಲ್ಲಿನ ವಿವಿಧ ವೃತ್ತಿಗಳಲ್ಲಿ ತೊಡಗಿಸಿಕೊಂಡಿರುವ ವೃತ್ತಿಪರ ಕುಶಲಕರ್ಮಿಗಳಿಗೆ ಪಿ.ಎಂ.ವಿಶ್ವಕರ್ಮ ಯೋಜನೆಯ ಸೌಲಭ್ಯಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯ ಸೌಲಭ್ಯ ಪಡೆಯಲು ಗ್ರಾಮ ಮತ್ತು ನಗರವಾರು ಬಡಿಗ ವೃತ್ತಿ ಮಾಡುವವರು, ದೋಣಿ ತಯಾರಿಸುವವರು, ಶಸ್ತ್ರ ತಯಾರಕರು, ಕಮ್ಮಾರ ವೃತ್ತಿ ಮಾಡುವವರು, ಕಲ್ಲುಕುಟಗ ವೃತ್ತಿ ಮಾಡುವವರು, ಬಟ್ಟೆ ಚಾಪೆ-ಕಸ ಪೊರಕೆ ತಯಾರಕರು, ಗೊಂಬೆ ಮತ್ತು ಆಟಿಕೆ ತಯಾರಕರು(ಸಂಪ್ರದಾಯಿಕ) ಕ್ಷೌರಿಕ ವೃತ್ತಿ ಮಾಡುವವರು, ಸುತ್ತಿಗೆ ಮತ್ತು ಉಪಕರಣಗಳನ್ನು ತಯಾರಿಸುವವರು, ಹೂಮಲೆ ತಯಾರಕರು, ಅಗಸರು(ದೋಬಿ, ಆಭರಣ ತಯಾರಕರು, ಶಿಂಪಿಗ(ಬಟ್ಟೆ ಹೊಲೆಯುವರು), ಕುಂಬಾರ ವೃತ್ತಿ ಮಾಡುವವರು, ಮೀನು ಬಲೆ ಹೆಣೆಯುವವರು, ಶಿಲ್ಪಿ(ಮೂರ್ತಿ ಮತ್ತು ಕಲ್ಲಿನ ಕೆತ್ತನೆ) ಚಮ್ಮಾರ ಪಾದರಕ್ಷೆ ತಯಾರಕರು, ಬೀಗ ತಯಾರಿಕ ಕುಶಲಕರ್ಮಿಗಳು ಹೆಚ್ಚಿನ ಸಂಖ್ಯೆಯಲ್ಲಿ https://pmvishwakarma.gov.in ವೆಬ್‍ಸೈಟ್ ನಲ್ಲಿ ಸ್ಥಳೀಯ ಸಾಮಾನ್ಯ ಸೇವಾ ಕೇಂದ್ರಗಳ, ಸಿ.ಎಸ್.ಸಿ. ಕೇಂದ್ರಗಳ ಮೂಲಕ  ನೋಂದಾಯಿಸಿಕೊಂಡು ಯೋಜನೆ ಸೌಲಭ್ಯ ಪಡೆದುಕೊಳ್ಳಿ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಯ ದಾಖಲಾತಿ: ಆಧಾರ್, ಪಾನ್, ರೇಷನ್ ಕಾರ್ಡ್, ಆಧಾರ್ ಲಿಂಕೆಡ್ ಮೊಬೈಲ್ ನಂಬರ್, ಬ್ಯಾಂಕ್ ಪಾಸ್‍ಬುಕ್ ಜೊತೆಗೆ ಅರ್ಜಿದಾರರೇ ಖುದ್ದಾಗಿ ಅರ್ಜಿ ಸಲ್ಲಿಸಬೇಕು.
[t4b-ticker]

You May Also Like

More From Author

+ There are no comments

Add yours