ವೇಣೂರು: ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ಪೊಸರಡ್ಕ ಶ್ರೀ ದೈವ, ಶ್ರೀ ಕೊಡಮಣಿತ್ತಾಯ, ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನ ಮತ್ತು ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಬ್ರಹ್ಮಕುಂಭಾಭಿಷೇಕ ಸಂಭ್ರಮದ ಧಾರ್ಮಿಕಸಭೆಯಲ್ಲಿ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಮಂಗಳೂರು ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಸದಾನಂದ ಪೂಜಾರಿ, ಕ್ಷೇತ್ರದ ಆಡಳಿತ ಸಮಿತಿ ಗೌರವಾಧ್ಯಕ್ಷ ಹೇಮರಾಜ್ ಕೆ. ಬೆಳ್ಳಿಬೀಡು, ಬ್ರಹ್ಮಕುಂಭಾಭಿಷೇಕ ಸಮಿತಿ ಅಧ್ಯಕ್ಷ ರಕ್ಷಿತ್ ಶಿವರಾಂ, ಜಿ.ಪಂ. ಮಾಜಿ ಅಧ್ಯಕ್ಷೆ ಜ್ಯೋತಿ ಸಾಲ್ಯಾನ್, ಆಡಳಿತ ಸಮಿತಿ ಅಧ್ಯಕ್ಷ ಜಯವರ್ಮ ಬುಣ್ಣು, ಗೌರವಾಧ್ಯಕ್ಷ ರಾಜೇಂದ್ರ ಬಳ್ಳಾಲ್, ಬ್ರಹ್ಮಕುಂಭಾಭಿಷೇಕ ಸಮಿತಿ ಕಾರ್ಯಾಧ್ಯಕ್ಷ ಎಂ.ಎಸ್. ಪೂಜಾರಿ, ನಾರಾಯಣ ಪೂಜಾರಿ, ಆದಿತ್ಯ ಪಿ.ಕೆ. ಮತ್ತಿತರರು ಉಪಸ್ಥಿತರಿದ್ದರು.





