ಮೇ.30ರಂದು ವಿದ್ಯುತ್ ವ್ಯತ್ಯಯ

 

 

 

 

ಚಿತ್ರದುರ್ಗ: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ಬೃಹತ್ ಕಾಮಗಾರಿ ಘಟಕದ ವತಿಯಿಂದ ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿರುವ ಪಂಡರಹಳ್ಳಿ ಲೈನ್‍ನ ಟ್ಯಾಪಿಂಗ್ ಪಾಯಿಂಟ್‍ನಿಂದ ಪಂಡರಹಳ್ಳಿ 66/11 ಕೆವಿ ವಿ.ವಿ ಕೇಂದ್ರದವರೆಗೆ ಡ್ರೇಕ್ ಕಂಡಕ್ಟರ್ ಬಳಸಿ ಉದ್ದೇಶಿತ 66 ಕೆವಿ ಲೈನ್ ಮತ್ತು ಕೊಯೊಟ್ ಕಂಡಕ್ಟರ್ ಬಳಸಿ ಹಾಲಿ ಇರುವ 66 ಕೆವಿ ಡಿ.ಸಿ ಲೈನ್‍ನಿಂದ ಮಲ್ಟಿ ಸಕ್ರ್ಯೂಟ್ ಟವರ್ ನಿರ್ಮಾಣ ಮಾಡಲು 66/11 ಕೆ.ವಿ ಪಂಡರಹಳ್ಳಿ ಕೇಂದ್ರದಿಂದ ಹೊರಹೊಮ್ಮುವ ಎಲ್ಲಾ 11 ಕೆ.ವಿ ಮಾರ್ಗಗಳ ಮಾರ್ಗ ಮುಕ್ತತೆ ನೀಡಬೇಕಾಗಿರುವುದರಿಂದ ವಿ.ವಿ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಎಲ್ಲಾ 11 ಕೆ.ವಿ ಮಾರ್ಗಗಳಲ್ಲಿ ಇದೇ ಮೇ.30ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು: ಅನ್ನೇಹಾಳು, ಹುಲ್ಲೂರು, ಪಂಡರಹಳ್ಳಿ, ಜಾನುಕೊಂಡ, ಸಿದ್ದಾಪುರ, ಗೋಡಬನಾಳು, ಸೊಂಡೆಕೊಳ, ಸೊಲ್ಲಾಪುರ, ಕುರುಬರಹಳ್ಳಿ, ಬೆಟ್ಟದನಾಗೇನಹಳ್ಳಿ, ಮಹದೇವನಕಟ್ಟೆ, ಸಿಂಗಾಪುರ, ಕಕ್ಕೇಹರವು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.  ಗ್ರಾಹಕರು ಸಹಕರಿಸಬೇಕು ಎಂದು ಚಿತ್ರದುರ್ಗ ಬೆಸ್ಕಾಂ ಕಾರ್ಯನಿರ್ವಾಹಕ  ಇಂಜಿನಿಯರ್ ತಿಳಿಸಿದ್ದಾರೆ.
[t4b-ticker]

You May Also Like

More From Author

+ There are no comments

Add yours