ಇಂದು ವಿದ್ಯುತ್ ವ್ಯತ್ಯಯ

 

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜ.23:
ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿರುವ 66/11 ಕೆ.ವಿ ಚಿತ್ರದುರ್ಗ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾರ್ಯಕ್ಕಾಗಿ ವಿ.ವಿ ಕೇಂದ್ರಕ್ಕೆ ಮಾರ್ಗ ಮುಕ್ತತೆ ನೀಡಬೇಕಾಗಿರುವುದರಿಂದ ಈ ವಿ.ವಿ ಕೇಂದ್ರದಿಂದ ಸರಬರಾಜಾಗುವ ಎಲ್ಲಾ ಎನ್‍ಜೆವೈ ಮತ್ತು ಕೃಷಿ 11 ಕೆ.ವಿ ಮಾರ್ಗಗಳಲ್ಲಿ ಇದೇ ಜ.24ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಇದನ್ನೂ ಓದಿ: ನೂತನ ಜಿಲ್ಲಾಧಿಕಾರಿಯಾಗಿ ಟಿ.ವೆಂಕಟೇಶ್ ಅಧಿಕಾರ ಸ್ವೀಕಾರ

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು: ಚಿತ್ರದುರ್ಗ ನಗರ, ಕೆಳಗೋಟೆ, ಹೊಳಲ್ಕೆರೆ ರಸ್ತೆ, ದಾವಣಗೆರೆ ರಸ್ತೆ, ವಿದ್ಯಾನಗರ ಪಿ.ಕೆ.ಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ಕೋರಿದ್ದಾರೆ.

[t4b-ticker]

You May Also Like

More From Author

+ There are no comments

Add yours