ಚಿತ್ರದುರ್ಗ :ಚಿತ್ರದುರ್ಗ ( chitradurga) ವಿಭಾಗ ವ್ಯಾಪ್ತಿಯಲ್ಲಿರುವ 220/66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯಕ್ಕಾಗಿ ವಿದ್ಯುತ್ ವಿತರಣಾ ಕೇಂದ್ರಕ್ಕೆ ಮಾರ್ಗ ಮುಕ್ತತೆ ನೀಡಬೇಕಾಗಿರುವುದರಿಂದ ಈ ವಿ.ವಿ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಎಲ್ಲಾ ಎನ್ಜೆವೈ ಮತ್ತು ಕೃಷಿ 11 ಕೆವಿ ಮಾರ್ಗಗಳಲ್ಲಿ ಇದೇ ಡಿಸೆಂಬರ್ 16ರಂದು ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಇದನ್ನೂ ಓದಿ: ಒಣ ಕೊಬ್ಬರಿ ಪ್ರತಿದಿನ ಸೇವನೆಯಿಂದ ಆರೋಗ್ಯಕ್ಕೆ ಪ್ರಯೋಜನಗಳು
ವಿದ್ಯುತ್ ಆಡಚಣೆಯಾಗುವ ಪ್ರದೇಶಗಳು: ಕಾಪರ್ ಮೇನ್ಸ್, ಕ್ಯಾದಿಗೆರೆ, ಜೆಎನ್ ಕೋಟೆ, ಕಾಸವರಹಟ್ಟಿ, ಪಲ್ಲವಗೆರೆ, ಇಂಡಸ್ಟ್ರಿಯಲ್ ಏರಿಯ, ಕೋಟೆ, ಜಿಲ್ಲಾ ಪಂಚಾಯತ್, ಸಜ್ಜನಕೆರೆ, ದಂಡಿನಕುರುಬರಹಟ್ಟಿ, ಕೆನ್ನೆಡಲು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಚಿತ್ರದುರ್ಗ ವಾಣಿಜ್ಯ, ಕಾರ್ಯ ಮತ್ತು ಪಾಲನ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
+ There are no comments
Add yours