SSLC ಮತ್ತು PUC ಯಲ್ಲಿ ಅತಿ ಹೆಚ್ಚು ಅಂಕ ಪಡೆದ ಮಕ್ಕಳಿಗೆ ಆ.07ರಂದು ಪ್ರತಿಭಾ ಪುರಸ್ಕಾರ ಸಮಾರಂಭ

 

 

 

 

ಚಿತ್ರದುರ್ಗ (ಕರ್ನಾಟಕ ವಾರ್ತೆ) ಆಗಸ್ಟ್ 05:
ಜಿಲ್ಲಾ ಮಾದಿಗ ನೌಕರರ ಸಾಂಸ್ಕøತಿಕ ಸಂಘದ ವತಿಯಿಂದ 2021-22ನೇ ಸಾಲಿನ ಎಸ್‍ಎಸ್‍ಎಲ್‍ಸಿ, ಪಿಯುಸಿ ಪರೀಕ್ಷೆಗಳಲ್ಲಿ ಅತಿಹೆಚ್ಚು ಅಂಕ ಪಡೆದ ಮತ್ತು ಪಿಹೆಚ್‍ಡಿ ಪಡೆದ ಪ್ರತಿಭಾನ್ವಿತರಿಗೆ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಇದೇ ಆಗಸ್ಟ್ 07ರಂದು ಬೆಳಿಗ್ಗೆ 10ಕ್ಕೆ ಚಿತ್ರದುರ್ಗ ನಗರದ ತರಾಸು ರಂಗಮಂದಿರದಲ್ಲಿ ಆಯೋಜಿಸಲಾಗಿದೆ.
ಚಿತ್ರದುರ್ಗದ ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ಹಿರಿಯೂರಿನ ಆದಿಜಾಂಬವ ಗುರುಪೀಠದ ಷಡಕ್ಷರಿಮುನಿ ಸ್ವಾಮೀಜಿ, ಐಮಂಗಲದ ಶರಣ ಹರಳಯ್ಯ ಗುರುಪೀಠದ ಶರಣ ಹರಳಯ್ಯಸ್ವಾಮೀಜಿ, ಮೊಳಕಾಲ್ಮುರಿನ ಚಿಕ್ಕುಂತಿ ಮಠದ ಶಿವಮೂರ್ತಿ ಸ್ವಾಮೀಜಿ ಅವರು ನೇತೃತ್ವವಹಿಸುವರು. ಚಿತ್ರದುರ್ಗ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಉದ್ಘಾಟನೆ ನೆರವೇರಿಸುವರು. ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಸನ್ಮಾನ ಕಾರ್ಯಕ್ರಮ ನೆರವೇರಿಸುವರು. ಪೌರಾಯುಕ್ತರು ಹಾಗೂ ಮಾದಿಗ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಚಂದ್ರಪ್ಪ ಅಧ್ಯಕ್ಷತೆವಹಿಸುವರು.
ಮುಖ್ಯ ಅತಿಥಿಗಳಾಗಿ ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವರಾದ ಬಿ.ಶ್ರೀರಾಮುಲು, ಕೆಎಸ್‍ಆರ್‍ಟಿಸಿ ನಿಗಮದ ಅಧ್ಯಕ್ಷರೂ ಹಾಗೂ ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ, ಹೊಸದುರ್ಗ ಶಾಸಕ ಗೂಳಿಹಟ್ಟಿ ಡಿ.ಶೇಖರ್, ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ಹಿರಿಯೂರು ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್, ಮಾಜಿ ಸಚಿವ ಹೆಚ್.ಆಂಜನೇಯ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಪೌರಸೇವಾ ನೌಕರರ ಸಂಘದ ಅಧ್ಯಕ್ಷ ಜಿ.ಎಸ್.ಮಂಜುನಾಥ್ ಭಾಗವಹಿಸಲಿದ್ದಾರೆ.
ವಿಶೇಷ ಆಹ್ವಾನಿತರಾಗಿ ಪಿಡಬ್ಲ್ಯೂಡಿ ಇಲಾಖೆ ನಿವೃತ್ತ ಅಪರ ಮುಖ್ಯ ಕಾರ್ಯದರ್ಶಿ ಬಿ.ಹೆಚ್.ಅನಿಲ್‍ಕುಮಾರ್, ಶಿವಮೊಗ್ಗ ಸರ್ಕಲ್ ಪಿಡಬ್ಲ್ಯೂಡಿ ಅಧೀಕ್ಷಕ ಅಭಿಯಂತರ ಕೆ.ಜಿ.ಜಗದೀಶ್, ಕೆಎಸ್‍ಇಇಬಿ ಕಾರ್ಯದರ್ಶಿ ಎಂ.ರೇವಣಸಿದ್ದಪ್ಪ, ಹೊಸದುರ್ಗ ತಹಶೀಲ್ದಾರ್ ಎಂ.ಮಲ್ಲಿಕಾರ್ಜುನ್, ತೀರ್ಥಹಳ್ಳಿ ಡಿವೈಎಸ್‍ಪಿ ಶಾಂತವೀರ, ಚಿತ್ರದುರ್ಗ ಎಇಇ ಎನ್.ಪಾತಪ್ಪ, ಹಿರಿಯೂರು ಎಇಇ ಎಲ್.ಹನುಮಂತಪ್ಪ, ಚಿತ್ರದುರ್ಗ ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಓ.ಪರಮೇಶ್ವರಪ್ಪ, ಬಿಸಿಎಂ ಇಲಾಖೆ ಚಳ್ಳಕೆರೆ ತಾಲ್ಲೂಕು ವಿಸ್ತರಣಾಧಿಕಾರಿ ಡಿ.ಟಿ.ಜಗನ್ನಾಥ್, ಹಿರಿಯೂರು ಪೌರಾಯುಕ್ತ ಡಿ.ಉಮೇಶ್, ಕಾಲೇಜು ಶಿಕ್ಷಣ ಇಲಾಖೆ ನಿವೃತ್ತ ಜಂಟಿನಿರ್ದೇಶಕ ಪ್ರೊ.ಸಿ.ಕೆ.ಮಹೇಶ್ವರಪ್ಪ, ನಿವೃತ್ತ ನಿರ್ದೇಶಕ ಎಂ.ಮಲ್ಲಣ್ಣ, ನಿವೃತ್ತ ಪ್ರಾಂಶುಪಾಲ ಹಾಗೂ ಸಾಹಿತಿ ಪ್ರೊ.ಹೆಚ್.ಲಿಂಗಪ್ಪ, ಪದವಿಪೂರ್ವ ಶಿಕ್ಷಣ ಇಲಾಖೆ ನಿವೃತ್ತ ಉಪನಿರ್ದೇಶಕ ಬಿ.ಆರ್.ಶಿವಕುಮಾರ್, ಹಿರಿಯೂರು ಅಂಬೇಡ್ಕರ್ ಕಾಲೇಜು ಪ್ರಾಂಶುಪಾಲ ಬಿ.ಪಿ.ತಿಪ್ಪೇಸ್ವಾಮಿ, ಪದವಿಪೂರ್ವ ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ಬಿ.ಆರ್.ಮಲ್ಲೇಶ್, ಚಿತ್ರದುರ್ಗ ತಾಲ್ಲೂಕು ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಟಿ.ಹೆಚ್.ಬಸವರಾಜ ಉಪಸ್ಥಿತರಿರುವರು.
2021-22ನೇ ಸಾಲಿನ ಎಸ್‍ಎಸ್‍ಎಲ್‍ಸಿ, ಪಿಯುಸಿಯಲ್ಲಿ 15 ವಿದ್ಯಾರ್ಥಿಗಳು ಪ್ರತಿ ತಾಲ್ಲೂಕಿನಿಂದ ಅತಿಹೆಚ್ಚು ಅಂಕ ಪಡೆದವರಿಗೆ ಮತ್ತು 2018-2022ರವರೆಗೆ ಪಿಹೆಚ್‍ಡಿ ಪದವಿ ಪಡೆದವರಿಗೆ ಸನ್ಮಾನಿಸಲಾಗುವುದು. ಅರ್ಜಿ ಸಲ್ಲಿಸಲು ಆಗಸ್ಟ್ 06 ರೊಳಗೆ ಸಂಘಕ್ಕೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗದ ಬಿ.ಹೆಚ್.ಶಿವಪ್ರಕಾಶ್-9535384938, ಹೊಸದುರ್ಗದ ಮೂರ್ತಪ್ಪ-9448272979, ಹೊಳಲ್ಕೆರೆಯ ಸಿದ್ದಲಿಂಗಪ್ಪ-9980764205, ಹಿರಿಯೂರು ರಾಮಣ್ಣ-9242843504, ಚಳ್ಳಕೆರೆ ದಯಾನಂದ-9731197815, ಮೊಳಕಾಲ್ಮುರಿನ ಚಿದಾನಂದ-9902993994 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

 

 

[t4b-ticker]

You May Also Like

More From Author

+ There are no comments

Add yours