ಪ್ರವೀಣ್ ನೆಟ್ಟಾರು ಪ್ರಕರಣ: ನಾಲ್ಕು ವರ್ಷಗಳ ಬಳಿಕ ಇಬ್ಬರು ಪ್ರಮುಖ ಆರೋಪಿಗಳು ಎನ್ಐಎ ಬಲೆಗೆ
ಮಂಗಳೂರು, ಜು. 12: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ವರ್ಷಗಳ ಬಳಿಕ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಇಬ್ಬರು ಮೋಸ್ಟ್ ವಾಂಟೆಡ್ ಆರೋಪಿಗಳನ್ನು ಬಂಧಿಸಿದೆ.
ಬಂಧಿತ ಆರೋಪಿಗಳನ್ನು 32 ವರ್ಷದ ನೌಷಾದ್ ಮತ್ತು 41 ವರ್ಷದ ಅಬ್ದುಲ್ ನಾಸಿರ್ ಎಂದು ಗುರುತಿಸಲಾಗಿದೆ. ನೌಷಾದ್ ಬೆಳ್ತಂಗಡಿಯ ಪದಂಗಡಿ ಪೋಯ್ಯಗುಡ್ಡೆಯ ನಿವಾಸಿಯಾಗಿದ್ದು, ಈತ ಬೆಂಗಳೂರಿನಲ್ಲಿ ಅಡಗಿಕೊಂಡಿದ್ದ. ಇನ್ನು ಮತ್ತೋರ್ವ ಅಬ್ದುಲ್ ನಾಸಿರ್ ಕೊಡಗಿನ ಸೋಮವಾರಪೇಟೆಯ ನಿವಾಸಿಯಾಗಿದ್ದು, ಕೇರಳದ ಕೊಚ್ಚಿಯಲ್ಲಿ ಈತನನ್ನು ಬಂಧಿಸಲಾಗಿದೆ. ಈ ಇಬ್ಬರು ಪ್ರಮುಖ ಆರೋಪಿಗಳ ಪತ್ತೆಗಾಗಿ ಎನ್ಐಎ ತಲಾ 2 ಲಕ್ಷ ರೂಪಾಯಿ ನಗದು ಬಹುಮಾನವನ್ನು ಘೋಷಿಸಿತ್ತು.



