ವಾಲ್ಮೀಕಿ ಜಾತ್ರೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸುವ ಸಾಧ್ಯತೆ

 

ದಾವಣಗೆರೆ ಜನವರಿ, 25: ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಪೀಠದ ಆವರಣದಲ್ಲಿ ಫೆಬ್ರವರಿ 8 ಮತ್ತು 9ರಂದು ವಾಲ್ಮೀಕಿ ಜಾತ್ರೆ ಅದ್ಧೂರಿಯಾಗಿ ಆಚರಿಸಲು ಎಲ್ಲಾ ರೀತಿಯ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ಈಗಾಗಲೇ ಮಹರ್ಷಿ ವಾಲ್ಮೀಕಿ ಜಾತ್ರೆಯ ವೇದಿಕೆ ಹಾಗೂ ಮಹಾ ಮಂಟಪ ನಿರ್ಮಾಣಕ್ಕೆ ಹಂದರ ಕಂಬದ ಪೂಜೆ ನೆರವೇರಿಸಲಾಗಿದೆ.

ಅದೇ ರೀತಿಯಲ್ಲಿ ಈ ಜಾತ್ರೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸಲು ಜಾತ್ರಾ ಮಹೋತ್ಸವ ಸಮಿತಿ ನಿರ್ಧರಿಸಿದೆ.

ವಾಲ್ಮೀಕಿ ಸಮಾಜದ ಎಸ್‌ಟಿ ಮೀಸಲಾತಿ ಹೆಚ್ಚಳವಾದ ಬೆನ್ನಲ್ಲೇ ಈ ಬಾರಿಯ ವಾಲ್ಮೀಕಿ ಜಾತ್ರೆಯನ್ನು ಅದ್ಧೂರಿಯಾಗಿ ಆಚರಿಸಲು ಸಮಾಜದ ಮುಖಂಡರು, ಶಾಸಕರು, ಪ್ರತಿನಿಧಿಗಳು ತೀರ್ಮಾನ ಮಾಡಿದ್ದಾರೆ. ಜಾತ್ರೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸಲು ಕೂಡ ಸಿದ್ಧತೆ ನಡೆಸಿದ್ದಾರೆ. ರಾಷ್ಟ್ರಪತಿ ಅವರ ಆಹ್ವಾನದ ಹಿಂದೆಯೂ ರಾಜಕೀಯ ಅಡಗಿದೆಯಾ ಎನ್ನುವ ಮಾತುಗಳು ಕೂಡ ಕೇಳಿಬರುತ್ತಿವೆ.

2023ರ ವಿಧಾನಸಭಾ ಚುನಾವಣಾ ವರ್ಷ ಆಗಿರುವುದರಿಂದ ಬಿಜೆಪಿ ಸರ್ಕಾರ ಇದರ ಲಾಭ ಪಡೆಯಲು ಸಜ್ಜಾಗಿದೆ. ಹಾಗೆಯೇ ಹರಿಹರದ ರಾಜನಹಳ್ಳಿ ಮಠದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ರಾಷ್ಟ್ರಪತಿ ಅವರನ್ನು ಕರೆತಂದರೆ ಸಮುದಾಯ ಬಿಜೆಪಿ ಬೆಂಬಲಿಸಲಿದೆ ಎಂಬ ವಿಶ್ವಾಸ ಹೊಂದಿದೆ.

ಬಿಜೆಪಿ ವಿರುದ್ಧ ಕಾಂಗ್ರೆಸ್‌ ಆರೋಪ

ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳದ ಲಾಭ ಪಡೆಯಲು ಬಿಜೆಪಿ ಸರ್ಕಾರ ಇನ್ನಿಲ್ಲದ ಪ್ರಯತ್ನ ನಡೆಸಿದೆ. ಒಂದು ಕಡೆ ಕಾಂಗ್ರೆಸ್ ಮೀಸಲಾತಿ ಮೂಗಿಗೆ ತುಪ್ಪ ಸವರುವ ಕೆಲಸ ಎಂದು ಅಪಪ್ರಚಾರದಲ್ಲಿ ತೊಡಗಿದ್ದರೇ, ಮೀಸಲಾತಿ ಕೊಟ್ಟಿದ್ದು ನಮ್ಮ ಸರ್ಕಾರ ಎಂದು ಬಿಜೆಪಿ ಸರ್ಕಾರ ಹೇಳುತ್ತಿದೆ

[t4b-ticker]

You May Also Like

More From Author

+ There are no comments

Add yours