ವೇಣೂರು: ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನದ ಆಚರಣೆ ಹಾಗೂ ತಾಲೂಕಿನ ಪ್ರತಿಭಾನ್ವಿತ ವಿದ್ಯಾರ್ಥಿಗಳ ಅಭಿನಂದನೆ ಕಾರ್ಯಕ್ರಮವು ಜು. 4ರಂದು ಬೆಳ್ತಂಗಡಿ ಮಿನಿ ವಿಧಾನ ಸೌಧದ ಬಳಿಯ ಲಯನ್ಸ್ ಕ್ಲಬ್ ಸಭಾಭವನದಲ್ಲಿ ಅಪರಾಹ್ನ 2-30ರಿಂದ ನಡೆಯಲಿದೆ.
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಸಮಾರಂಭವನ್ನು ಉದ್ಘಾಟಿಸಲಿದ್ದು, ಸಂಘದ ಅಧ್ಯಕ್ಷ ತುಕಾರಾಮ್ ಬಿ. ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ದಾಂಡೇಲಿ ಪತ್ರಕರ್ತರ ಸಂಘದ ಅಧ್ಯಕ್ಷ ಸಂದೇಶ್ ಜೈನ್ ಉಪನ್ಯಾಸ ನೀಡಲಿದ್ದು, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಮಂಜುವಾಣಿ ಪತ್ರಿಕೆಯ ಸಂಪಾದಕರಾದ ಭಾಸ್ಕರ್ ಹೆಗಡೆ, ಜಿಲ್ಲಾಧ್ಯಕ್ಷ ಪುಷ್ಪರಾಜ್ ಬಿ.ಎನ್., ರಾಜ್ಯ ಕಾರ್ಯಗಾರಿ ಸದಸ್ಯ ಶ್ರೀನಿವಾಸ್ ನಾಯಕ್ ಇಂದಾಜೆ, ತಾ.ಪ. ಸಂಘದ ಅಧ್ಯಕ್ಷ ಪುಷ್ಪರಾಜ ಶೆಟ್ಟಿ, ಸಂಘದ ಪ್ರ. ಕಾರ್ಯದರ್ಶಿ ಮನೋಹರ ಬಳಂಜ ಭಾಗವಹಿಸಲಿದ್ದಾರೆ.



