ರಾಜ್ಯದಲ್ಲಿ ಕನ್ನಡ ಆಡಳಿತ ಭಾಷೆಯಾಗಲಿ:ಸಿ.ಕೆ.ರಾಮೇಗೌಡ

 

 

 

 

ವರದಿ : ಸುರೇಶ್ ಪಟ್ಟಣ್

ಚಿತ್ರದುರ್ಗ ಮಾ. ೦೪: ಕನ್ನಡ ಶಾಲೆಗಳನ್ನು ಸಬಲೀಕರಣಗೊಳಿಸಿ ರಾಜ್ಯದಲ್ಲಿ ಕನ್ನಡವನ್ನು ಆಡಳಿತ ಭಾಷೆಯನ್ನಾಗಿ ಮಾಡಬೇಕೆಂಬುದು ನನ್ನ ಬಯಕೆ. ಹಾಗಾಗಿ ಈ ಬಾರಿಯ ಕಸಾಪ. ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸಿ ಕನ್ನಡದ ಸೇವೆಗೆ ಅವಕಾಶ ಒದಗಿಸುವಂತೆ ಮತದಾರರಲ್ಲಿ ಸಿ.ಕೆ.ರಾಮೇಗೌಡ ವಿನಂತಿಸಿದರು.

ಪತ್ರಕರ್ತರ ಭವನದಲ್ಲಿ ಗುರುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಕನ್ನಡ ಶಾಲೆಗಳನ್ನು ಸಬಲೀಕರಣಗೊಳಿಸಿ ರಾಜ್ಯದಲ್ಲಿ ಕನ್ನಡವನ್ನು ಆಡಳಿತ ಭಾಷೆಯನ್ನಾಗಿ ಮಾಡಬೇಕೆಂಬುದು ನನ್ನ ಬಯಕೆ. ಹಾಗಾಗಿ ಈ ಬಾರಿಯ ಕಸಾಪ. ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸಿ ಕನ್ನಡದ ಸೇವೆಗೆ ಅವಕಾಶ ಒದಗಿಸುವಂತೆ ಮತದಾರರಲ್ಲಿ ವಿನಂತಿಸಿದ್ದು, ನಲವತ್ತು ವರ್ಷಗಳಿಂದಲೂ ಕನ್ನಡ ನಾಡು ನುಡಿಗೆ ಅನುಪಮ ಸೇವೆ ಸಲ್ಲಿಸಕೊಂಡು ಬರುತ್ತಿದ್ದು, ಈ ಬಾರಿಯ ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿದ್ದೇನೆ. ಕನ್ನಡ ಸಾಹಿತ್ಯ ಪರಿಷತ್‌ನ್ನು ಕನ್ನಡಿಗರ ಪರಿಷತ್ತನ್ನಾಗಿ ಮಾಡುವ ಆಸೆಯಿಟ್ಟುಕೊಂಡು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿದ್ದೇನೆ ಎಂದರು.

 

 

ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿಯೂ ಪ್ರವಾಸ ಮಾಡಿ ಮತದಾರರನ್ನು ಭೇಟಿಯಾಗು ತ್ತಿದ್ದೇನೆ. ಈಗಾಗಲೇ ಬೀದರ್‌ನಿಂದ ಬಳ್ಳಾರಿವರೆಗೆ ಸುತ್ತಾಡಿ ಮತಯಾಚನೆಯಲ್ಲಿ ತೊಡಗಿದ್ದೇನೆ. ಕರ್ನಾಟಕ ರಾಜ್ಯವನ್ನು ಅಖಂಡ ಕರ್ನಾಟಕವಾಗಿಸುವ ಉದ್ದೇಶವಿಟ್ಟುಕೊಂಡು ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವ ತೀರ್ಮಾನ ಕೈಗೊಂಡಿದ್ದೇನೆ. ಕನ್ನಡ ಶಾಲೆಗಳನ್ನು ಸಬಲೀಕರಣಗೊಳಿಸಿ ರಾಜ್ಯದಲ್ಲಿ ಕನ್ನಡವನ್ನು ಆಡಳಿತ ಭಾಷೆಯನ್ನಾಗಿ ಮಾಡಬೇಕೆಂಬುದು ನನ್ನ ಬಯಕೆ. ಹಾಗಾಗಿ ಈ ಬಾರಿಯ ಕಸಾಪ. ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸಿ ಕನ್ನಡದ ಸೇವೆಗೆ ಅವಕಾಶ ಒದಗಿಸುವಂತೆ ಮತದಾರರಲ್ಲಿ ವಿನಂತಿಸಿದರು.

ಮಹತ್ವವಾದ ಕನ್ನಡ ಸಾಹಿತ್ಯವನ್ನು ಇತರೆ ಭಾಷೆಗಳಿಗೆ ಅನುವಾದಿಸಿ ಮುದ್ರಿಸುವುದು. ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯತ್ವ ಪಡೆಯುವುದು, ಪುಸ್ತಕ ಖರೀಧಿ ಸೇರಿದಂತೆ ಪರಿಷತ್ತಿನ ಎಲ್ಲಾ ಚಟುವಟಿಕೆಗಳು ಅಂರ್ತಜಾಲದ ಮೂಲಕ ನಡೆಯುವಂತೆ ನೋಡಿಕೊಳ್ಳುವುದು. ಯುವ ಬರಹಗಾರರಿಗೆ ಹಾಗೂ ಮಹಿಳಾ ಸಾಹಿತಿಗಳಿಗೆ ಪರಿಷತ್ತಿನ ವೇದಿಕೆಗಳಲ್ಲಿ ಹೆಚ್ಚಿನ ಅವಕಾಶಗಳನ್ನು ಕಲ್ಪಿಸುವುದು. ಆಸಕ್ತ ಸಾಹಿತಿಗಳು ಹಾಗೂ ಕಲಾವಿದರುಗಳಿಗೆ ಆರೋಗ್ಯ ವಿಮೆ ಜಾರಿಗೆ ತರುವುದು. ಪರಿಷ್ಕೃತ ಡಾ.ಸರೋಜಿನಿ ಮಹಿಷಿ ವರದಿಯನ್ನು ಅನುಷ್ಟಾನಗೊಳಿಸಲು ಅದಕ್ಕೆ ಆಂಧ್ರ ರಾಜ್ಯ ಮಾದರಿಯಲ್ಲಿ ಕಾನೂನು ಶಕ್ತಿ ತುಂಬಲು ಸರ್ಕಾರದ ಮೇಲೆ ಒತ್ತಡ ಹೇರುವುದು. ರಾಜ್ಯದ ಗಡಿಭಾಗಗಳಲ್ಲಿ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಕನ್ನಡ ಉಳಿವಿಗಾಗಿ ನಿರ್ಧಿಷ್ಟ ಕಾರ್ಯಯೋಜನೆ ರೂಪಿಸಿ ಹೊರರಾಜ್ಯಗಳಲ್ಲಿ ಕನ್ನಡ ಸಮಾವೇಶಗಳನ್ನು ನಡೆಸಿ ಕನ್ನಡಿಗರಲ್ಲಿ ಆತ್ಮವಿಶ್ವಾಸ ಮೂಡಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಶ್ರಮಿಸುವ ಉದ್ದೇಶವಿಟ್ಟುಕೊಂಡು ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವ ಆಸೆಯಿಟ್ಟುಕೊಂಡಿದ್ದೇನೆ. ಅದಕ್ಕೆ ಕಸಾಪ ಮತದಾರರ ಬೆಂಬಲ ಬೇಕು ಎಂದು ಕೋರಿದರು.

ಬಾಬುರಾವ್, ನಟರಾಜ್, ರಾಮಣ್ಣ, ಶಿವಕುಮಾರ್, ದುರ್ಗಾವರ ತಿಪ್ಪೇಸ್ವಾಮಿ ಪತ್ರಿಕಾಗೋಷ್ಟಿಯಲ್ಲಿ ಹಾಜರಿದ್ದರು.

[t4b-ticker]

You May Also Like

More From Author

+ There are no comments

Add yours