ಬೆಂಗಳೂರು, ಅ. 6: ಕರ್ನಾಟಕದಲ್ಲಿ ಹಾಲಿನ ದರ ಏರಿಕೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕೊನೆ ಒಂದು ಅಂತಿಮ ನಿರ್ಧಾರಕ್ಕೆ ಬಂದಿದೆ. ಪ್ರತಿ ಲೀಟರ್ ಹಾಲಿನ ದರ 10 ರೂಪಾಯಿ ಹೆಚ್ಚಿಸಬೇಕೆಂದು ಹಾಲು ಮಾರಾಟ ಒಕ್ಕೂಟಗಳು ಮನವಿ ಮಾಡಿದ್ದವು. ಆದ್ರೆ. ಇದೀಗ ಸರ್ಕಾರ ಅಳೆದು ತೂಗಿ ಪ್ರತಿ ಲೀಟರ್ಗೆ 8 ರೂ. ಹೆಚ್ಚಳ ಮಾಡಲು ತೀರ್ಮಾನಿಸಿದೆ. ಈ ಸಂಬಂಧ ಇಂದು (ಅಕ್ಟೋಬರ್ 06) ನಡೆದ ಸಚಿವ ಸಂಪುಟದಲ್ಲಿ ಹಾಲಿನ ದರ ಏರಿಕೆ ಬಗ್ಗೆ ಚರ್ಚೆಯಾಗಿದ್ದು, ದರ ಎಷ್ಟು ಹೆಚ್ಚಳ ಎನ್ನುವುದನ್ನು ತೀರ್ಮಾನಿಸಲು ಸಿಎಂ ವಿವೇಚನೆಗೆ ಬಿಡಲಾಯ್ತು. ಇನ್ನು ಸಿಎಂ ಡಿಕೆ ಶಿವಕುಮಾರ್ 10. 12 ರೂಪಾಯಿ ಬೇಡ. 8 ರೂಪಾಯಿ ಏರಿಕೆಗೆ ಒಲವು ತೋರಿದ್ದು, ಇದಕ್ಕೆ ಸಚಿವ ಸಂಪುಟ ಸಹ ಸಮ್ಮತಿಸಿದೆ. ಆದ್ರೆ, ಸದ್ಯ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ. ಹೀಗಾಗಿ ಚುನಾವಣಾ ಆಯೋಗದ ಅನುಮತಿ ಪಡೆದು ದರ ಹೆಚ್ಚಳದ ಬಗ್ಗೆ ಅಧಿಕೃತ ಆದೇಶ ಹೊರಡಿಸಲಿದೆ.




