ಮತಗಟ್ಟೆಗಳ ಬದಲಾವಣೆ ಪ್ರಸ್ತಾವನೆ

 

  ಮತಗಟ್ಟೆಗಳ ಬದಲಾವಣೆ ಪ್ರಸ್ತಾವನೆ
**************
ರಾಜಕೀಯ ಪಕ್ಷಗಳ ಗಮನಕ್ಕೆ ತಂದು ಆಯೋಗದ ಅನುಮೋದನೆಗೆ ಸಲ್ಲಿಕೆ
*******************
ಚಿತ್ರದುರ್ಗ(ಕರ್ನಾಟಕ ವಾರ್ತೆ)ಮಾ.14:
ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಸಂಬಂಧ ಮತದಾನ ಕೇಂದ್ರಗಳ ಹೆಸರು ಹಾಗೂ ವಿಳಾಸ ಬದಲಾವಣೆ ಪ್ರಸ್ತಾವನೆಗೆ ಭಾರತ ಚುನಾವಣಾ ಆಯೋಗದ ಅನುಮೋದನೆ ಪಡೆಯುವ ಕುರಿತು ಬುಧವಾರ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧ್ಯಕ್ಷತೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರ ಸಭೆಯ ನಡೆಸಲಾಯಿತು.
ಚುನಾವಣಾ ಆಯೋಗದ ನಿಯಮಾನುಸಾರ ಮತಗಟ್ಟೆಗಳ ಹೆಸರು ಬದಲಾವಣೆ ಪ್ರಸ್ತಾವನೆಗಳಿದ್ದಲ್ಲಿ ಜಿಲ್ಲಾ ಚುನಾವಣಾಧಿಕಾರಿಗಳು ಅಂತಹ ಮತದಾನ ಕೇಂದ್ರಗಳ ಪಟ್ಟಿಯನ್ನು ರಾಜಕೀಯ ಪಕ್ಷಗಳ ಗಮನಕ್ಕೆ ತಂದು ಭಾರತ ಚುನಾವಣಾ ಆಯೋಗದ ಅನುಮೋದನೆಗೆ ಸಲ್ಲಿಸಬೇಕಿರುತ್ತದೆ.  ಅದರಂತೆ ಚಿತ್ರದುರ್ಗ ಜಿಲ್ಲೆಗೆ ಸಂಬಂಧಿಸಿದ ಮತಗಟ್ಟೆಗಳ ಪಟ್ಟಿಯನ್ನು ಹಾಜರಿದ್ದ ಎಲ್ಲಾ ರಾಜಕೀಯ ಪಕ್ಷಗಳ ಗಮನಕ್ಕೆ ತರಲಾಯಿತು. ಅಸ್ತಿತ್ವದಲ್ಲಿರುವ ಮತಗಟ್ಟೆಗಳ ಹೆಸರು ಹಾಗೂ ವಿಳಾಸ ಬದಲಾವಣೆಗೆ ಪ್ರಸ್ತಾಪಿತ ಮತಗಟ್ಟೆಗಳ ಹೆಸರುಗಳ ಪಟ್ಟಿಯನ್ನು ರಾಜಕೀಯ ಪಕ್ಷಗಳ ಗಮನಕ್ಕೆ ತರಲಾಯಿತು.
ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 4 ಮತಗಟ್ಟೆಗಳ ಸ್ಥಳ ಹಾಗೂ ಹೆಸರು ಬದಲಾವಣೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಮತಗಟ್ಟೆ ಸಂಖ್ಯೆ 217ರ ಸರ್ಕಾರಿ ಪ್ರೌಢಶಾಲೆ, ಪಿ.ಮಹದೇವಪುರ-1 (ರೂಂ ನಂ-1) ಮತಗಟ್ಟೆಯನ್ನು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಪಿ.ಮಹದೇವಪುರ-1 (ರೂಂ-1)ಗೆ ಬದಲಾವಣೆ ಮಾಡಲಾಗಿದೆ. ಮತಗಟ್ಟೆ ಸಂಖ್ಯೆ 224 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಓಬಳಾಪುರದಿಂದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಓಬಳಾಪುರಕ್ಕೆ ಬದಲಾವಣೆ ಮಾಡಲಾಗಿದೆ. ಮತಗಟ್ಟೆ ಸಂಖ್ಯೆ-225 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ,. ರೂಂ.-1, ತಿಮ್ಮಣ್ಣನಾಯಕನಕೋಟೆ (ಟಿ.ಎನ್.ಕೋಟೆ)ಯಿಂದ ಸರ್ಕಾರಿ ಪ್ರೌಢಶಾಲೆ, ರೂಂ-1, ತಿಮ್ಮಣ್ಣನಾಯಕನಕೋಟೆ (ಟಿ.ಎನ್.ಕೋಟೆ)ಗೆ ಬದಲಾವಣೆ ಮಾಡಲಾಗಿದೆ. ಮತಗಟ್ಟೆ ಸಂಖ್ಯೆ 226 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ರೂಂ-2 ತಿಮ್ಮಣ್ಣನಾಯಕನಕೋಟೆ (ಟಿ.ಎನ್.ಕೋಟೆ)ಯಿಂದ ಸರ್ಕಾರಿ ಪಿಯು ಕಾಲೇಜು, ರೂಂ-2, ತಿಮ್ಮಣ್ಣನಾಯಕನಕೋಟೆ (ಟಿ.ಎನ್.ಕೋಟೆ)ಗೆ ಬದಲಾವಣೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ.
ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 2 ಮತಗಟ್ಟೆಗಳ ಸ್ಥಳ ಹಾಗೂ ಹೆಸರು ಬದಲಾವಣೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಮತಗಟ್ಟೆ ಸಂಖ್ಯೆ 39 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ,  ರೂಂ-1, ಸಿದ್ದವ್ವನಹಳ್ಳಿಯಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ರೂಂ-1, ವಡ್ಡರಸಿದ್ದವ್ವನಹಳ್ಳಿಗೆ ಬದಲಾವಣೆ ಮಾಡಲಾಗಿದೆ. ಮತಗಟ್ಟೆ ಸಂಖ್ಯೆ 40 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ,  ರೂಂ-2, ಸಿದ್ದವ್ವನಹಳ್ಳಿಯಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ರೂಂ-2, ವಡ್ಡರಸಿದ್ದವ್ವನಹಳ್ಳಿಗೆ ಬದಲಾವಣೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ.
ಜಿಲ್ಲೆಯ ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರದಲ್ಲಿ 285 ಮತಗಟ್ಟೆಗಳು, ಚಳ್ಳಕೆರೆ-260, ಚಿತ್ರದುರ್ಗ-288, ಹಿರಿಯೂರು-287, ಹೊಸದುರ್ಗ-242 ಹಾಗೂ ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದಲ್ಲಿ 299 ಮತಗಟ್ಟೆಗಳು ಸೇರಿದಂತೆ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಿಂದ ಒಟ್ಟು 1661 ಮತಗಟ್ಟೆಗಳು ಇವೆ. ರಾಜಕೀಯ ಪಕ್ಷಗಳೊಂದಿಗೆ ಸಮಾಲೋಚನೆ ನಡೆಸಿದ ನಂತರ ಮತಗಟ್ಟೆಗಳ ಹೆಸರು ಬದಲಾವಣೆಯ ಪ್ರಸ್ತಾವನೆಗಳನ್ನು ಸಮುಚಿತ ಮಾರ್ಗದ ಮೂಲಕ  ಭಾರತ ಚುನಾವಣಾ ಆಯೋಗಕ್ಕೆ ಅನುಮೋದನೆಗಾಗಿ ಸಲ್ಲಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.
ಸಭೆಯಲ್ಲಿ ಉಪವಿಭಾಗಾಧಿಕಾರಿ ಎಂ.ಕಾರ್ತೀಕ್, ಜಿಲ್ಲಾ ಜೆಡಿಎಸ್ ಮಹಾ ಪ್ರಧಾನ ಕಾರ್ಯದರ್ಶಿ ಡಿ.ಗೋಪಾಲಸ್ವಾಮಿ ನಾಯಕ, ಸಿಪಿಐ ಡಿಒಸಿ ಸಿ.ಕೆ.ಗೌಸ್‍ಪೀರ್, ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ಸಿ.ಜೆ.ನಾಸಿರುದ್ದೀನ್, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಹೆಚ್.ಬಿ.ನರೇಂದ್ರ,  ಬಿಎಸ್‍ಪಿ ಜಿಲ್ಲಾ ಸಂಯೋಜಕ ಹೆಚ್.ಎನ್.ಶಿವಮೂರ್ತಿ ಸೇರಿದಂತೆ ಚುನಾವಣಾ ಸಿಬ್ಬಂದಿ ಇದ್ದರು.
[t4b-ticker]

You May Also Like

More From Author

+ There are no comments

Add yours