ಎಲ್ಲಾ ಬಡ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಿ: ಅಂಬೇಡ್ಕರ್ ಸ್ವಾಭಿಮಾನಿ ಸೇನೆ..

 

 

 

 

ಚಿತ್ರದುರ್ಗ,ಫೆ.೧೬:ವಸತಿ ರಹಿತ ಬಡವರಿಗೆ ನಿವೇಶನ ಹಾಗೂ ಎಲ್ಲಾ ಜಾತಿಯ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಬೇಕು ಎಂದು ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ಕಾರ್ಯಕರ್ತರು ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು.

ನಗರದ ಗಾಂಧಿ ವೃತ್ತದಿಂದ ಪ್ರಾರಂಭಗೊಂಡ ಪ್ರತಿಭಟನೆ ಬಿಡಿ ರಸ್ತೆಯ ಮೂಲಕ ಸಾಗಿ ಒನಕೆ ಓಬವ್ವ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.

 

 

ಕಳೆದ ಐದಾರು ವರ್ಷಗಳಿಂದ ನಗರದಲ್ಲಿ ವಾಸವಿರುವ ಬಡವರು, ಕೂಲಿಕಾರರು ಹಾಗೂ ನಿರ್ಗತಿಕರು ನಿವೇಶನ, ಮನೆಗಳನ್ನು ನೀಡುವಂತೆ ಸಾಕಷ್ಟು ಭಾರೀ ಮನವಿ ಸಲ್ಲಿಸಿದ್ದಾರೆ. ಆದರೆ ಇದುವರೆಗೂ ಕೂಡ ಜಿಲ್ಲಾಡಳಿತ ಅಥವಾ ತಾಲ್ಲೂಕು ಆಡಳಿತವಾಗಲಿ ಕ್ರಮ ಕೈಗೊಂಡಿಲ್ಲ. ಶ್ರೀಮಂತರು, ೫-೬ ಮನೆಗಳು ಇರುವವರು, ರಾಜಕೀಯ ವ್ಯಕ್ತಿಗಳು ಮತ್ತು ಹಣ ಬಲ ಉಳ್ಳವರಿಗೆ ನಿವೇಶನ ಹಾಗೂ ಮನೆಗಳನ್ನು ಹಂಚಿಕೆ ಮಾಡಲಾಗುತ್ತಿದೆ. ಇದರಿಂದ ಬಡ ಜನತೆ ಗುಡಿಸಲು ಹಾಗೂ ಶೇಡ್ ಗಳಲ್ಲೆ ವಾಸ ಮಾಡುವ ಪರಿಸ್ಥಿತಿ ಇದೆ. ಆದ್ದರಿಂದ ಸೂಕ್ತ ಫಲಾನುಭವಿಗಳಿಗೆ ಮನೆ ಹಾಗೂ ನಿವೇಶನಗಳನ್ನು ನೀಡಬೇಕು. ಕೊರೊನಾದಿಂದಾಗಿ ದೇಶದೆಲ್ಲೆಡೆ ಜನರು ಜೀವನ ನಡೆಸುವುದೆ ತುಂಬಾ ಕಷ್ಟಕರವಾಗಿದೆ. ಇಂತಹ ಸ್ಥಿತಿಯಲ್ಲಿ ಶಾಲಾ ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಿದರೆ ಬಹಳಷ್ಟು ಅನುಕೂಲಕರವಾಗಲಿದೆ ಎಂದು ಮನವಿ ಮಾಡಿದರು.

ನಮ್ಮ ಆಹಾರ ನಮ್ಮ ಹಕ್ಕು ಎಂದು ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಬರೆದಿದ್ದಾರೆ. ಆದರೆ ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ಸರ್ಕಾರ ಗೋ ಮಾಂಸ ತಿನ್ನಬಾರದು ಎಂದು ಹೇಳುವುದು ಎಷ್ಟು ಸರಿ, ಇಂತಹ ಕಾಯ್ದೆಗಳನ್ನು ಯಾವುದೇ ಕಾರಣಕ್ಕೂ ಜಾರಿಗೆ ತರಬಾದರು ಎಂದು ಆಗ್ರಹಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಪ್ರತಿಭಟನೆಯ ನೇತೃತ್ವವನ್ನು ಸಂಘಟನೆಯ ಜಿಲ್ಲಾಧ್ಯಕ್ಷ ಕೆ.ರಾಮಚಂದ್ರ ವಹಿಸಿದ್ದರು.

[t4b-ticker]

You May Also Like

More From Author

+ There are no comments

Add yours