ಪಿಯುಸಿ ಫಲಿತಾಂಶ ದಕ್ಷಿಣ ಕನ್ನಡಕ್ಕೆ ಪ್ರಥಮ ಸ್ಥಾನ,ಯಾವ ಜಿಲ್ಲೆಗೆ ಎಷ್ಟು ಸ್ಥಾನ

 

ಬೆಂಗಳೂರು : 2022-23 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ( Karnataka Second PUC Exam Results ) ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ ಶೇ. 74.64 ಫಲಿತಾಂಶ ಬಂದಿದೆ. ಕಳೆದ ಬಾರಿ 61.88 ಫಲಿತಾಂಶ ಬಂದಿತ್ತು. ಈ ಬಾರಿಯೂ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದೆ.

ಕೆಎಸ್ ಇಎಬಿ ಅಧ್ಯಕ್ಷ ಡಾ. ರಾಮಚಂದ್ರನ್ ಸುದ್ದಿಗೋಷ್ಠಿಯಲ್ಲಿ ಇಂದು ದ್ವಿತೀಯ ಪಿಯುಸಿಫಲಿತಾಂಶವನ್ನು ಬಿಡುಗಡೆ ಮಾಡಿದ್ದಾರೆ. ಒಒಟ್ಟು 61 ಕೇಂದ್ರಗಳಲ್ಲಿ ಮೌಲ್ಯಮಾಪನ ಮಾಡಲಾಗಿದೆ. ಒಟ್ಟು 7,02,067 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 5,24, 209 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಕಲಾವಿಭಾಗದಲ್ಲಿ 1,34, 876 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 61.22 ರಷ್ಟು ಫಲಿತಾಂಶ ಬಂದಿದೆ. ವಾಣಿಜ್ಯ ವಿಭಾಗದಲ್ಲಿ 75.89 ರಷ್ಟು ಫಲಿತಾಂಶ ಬಂದರೆ, ವಿಜ್ಞಾನ ವಿಬಾಗದಲ್ಲಿ 2,07,087 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 85.71 ರಷ್ಟು ಫಲಿತಾಂಶ ಬಂದಿದೆ.

ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಬೆಂಗಳೂರಿನ ಜಯನಗರ ಕಾಲೇಜಿನ ತಬಸ್ಸುಮ್ 600 ಕ್ಕೆ 593 ಪ್ರಥಮ ಸ್ಥಾನ ಪಡೆದರೆ, ವಾಣಿಜ್ಯ ವಿಭಾಗದಲ್ಲಿ ಆಳ್ವಾಸ್ ಕಾಲೇಜಿನ ಅನನ್ಯ 600 ಕ್ಕೆ 600 ಅಂಕ ಪಡೆದು ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ವಿಜ್ಞಾನ ವಿಭಾಗದಲ್ಲಿ 600 ಕ್ಕೆ 596 ಅಂಕ ಪಡೆದು ಕೌಶಿಕ್ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಯಾವ ಜಿಲ್ಲೆಗೆ ಎಷ್ಟನೇ ಸ್ಥಾನ? ಇಲ್ಲಿದೆ ಮಾಹಿತಿ

[t4b-ticker]

You May Also Like

More From Author

+ There are no comments

Add yours