ಪುತ್ತೂರು, ಡಿ. 9: ಕಂಪನಿಯೊಂದಕ್ಕೆ ತಲಾ 60 ಕೆಜಿ ತೂಕದ ಕಾಫಿ ಬೀಜ ತುಂಬಿದ 320 ಗೋಣಿಚೀಲಗಳನ್ನು ಸಾಗಿಸುತ್ತಿದ್ದ ಲಾರಿಯೊಂದರಿಂದ ಸುಮಾರು 21,44,000 ರೂ. ಮೌಲ್ಯದ 80 ಗೋಣಿ ಚೀಲಗಳನ್ನು ಕಳವು ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಮಂದಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಕೃತ್ಯಕ್ಕೆ ಬಳಸಿದ ಎರಡು ಆಟೋ, ಒಂದು ಗೂಡ್ಸ್ ಟೆಂಪೋಗಳನ್ನು ಹಾಗೂ ಕಳುವಾದ 60 ಕೆಜಿ ತೂಕದ ಕಾಫಿ ತುಂಬಿದ 80 ಚೀಲಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.
ಬಂಧಿತರನ್ನು ಆರೋಪಿ ಆಶ್ಲೇಷ ಭಟ್ ಹಾಗೂ ಆತನ ಸಹಚರರಾದ ನಾರಾಯಣ ಶೆಟ್ಟಿಗಾರ್, ಮಿಥುನ್ ಕುಮಾರ್, ವಿಜಯ ಶೆಟ್ಟಿ, ಮಹಮ್ಮದ್ ಅಶ್ರಫ್ ಎಂದು ಗುರುತಿಸಲಾಗಿದೆ.






