ನಟಿ ರಾಧಿಕಾ ಪಂಡಿತ್ ಅವರು ಸಡಗರದಿಂದ ವರಮಹಾಲಕ್ಷ್ಮಿ ಹಬ್ಬವನ್ನು ಆಚರಿಸಿದ್ದಾರೆ. ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ. ಆದರೆ ಈ ಬಾರಿ ಅವರ ಜೊತೆಯಲ್ಲಿ ಪತಿ ಯಶ್ ಕಾಣಿಸಿಲ್ಲ. ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾದ ಪ್ರಚಾರದಲ್ಲಿ ಬ್ಯುಸಿ ಇರುವುದರಿಂದ ಯಶ್ ಅವರು ಹಬ್ಬದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿಲ್ಲ.


ಎಲ್ಲೆಡೆ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ ಕಳೆಗಟ್ಟಿದೆ. ರಾಧಿಕಾ ಪಂಡಿತ್ ಹಾಗೂ ಯಶ್ ದಂಪತಿಯ ಮನೆಯಲ್ಲಿ ಕೂಡ ಸಂಭ್ರಮದಿಂದ ಹಬ್ಬ ಆಚರಿಸಿದ್ದಾರೆ. ಫೋಟೋಗಳು ವೈರಲ್ ಆಗಿವೆ. ರಾಧಿಕಾ ಪಂಡಿತ್ ಅವರು ಸೋಶಿಯಲ್ ಮೀಡಿಯಾ ಮೂಲಕ ಅಭಿಮಾನಿಗಳಿಗೆ ಅಪ್ಡೇಟ್ ನೀಡಿದ್ದಾರೆ. ಈ ಫೋಟೋಗಳನ್ನು ಹಂಚಿಕೊಂಡು ವರಮಹಾಲಕ್ಷ್ಮಿ ಹಬ್ಬದ ಶುಭಾಶಯ ತಿಳಿಸಿದ್ದಾರೆ.

ಪ್ರತಿ ಹಬ್ಬದಲ್ಲಿ ಯಶ್ ಕೂಡ ಜೊತೆಯಾಗುತ್ತಿದ್ದರು. ಆದರೆ ಈ ಬಾರಿ ಅವರು ‘ಟಾಕ್ಸಿಕ್’ ಸಿನಿಮಾದ ಪ್ರಚಾರದಲ್ಲಿ ತೊಡಗಿಕೊಂಡಿರುವ ಕಾರಣದಿಂದ ಹಬ್ಬ ಆಚರಿಸಲು ಅವರಿಗೆ ಬಿಡುವು ಸಿಕ್ಕಿಲ್ಲ. ಯಶ್ ಅವರು ವಿವಿಧ ನಗರಗಳಿಗೆ ಭೇಟಿ ನೀಡಿ ‘ಟಾಕ್ಸಿಕ್’ ಚಿತ್ರದ ಪ್ರಮೋಷನ್ ಮಾಡುತ್ತಿದ್ದಾರೆ. ಅವರ ಅನುಪಸ್ಥಿತಿಯಲ್ಲೇ ರಾಧಿಕಾ ಪಂಡಿತ್ ಅವರು ಮಕ್ಕಳ ಜೊತೆ ಹಬ್ಬವನ್ನು ಆಚರಿಸಿದ್ದಾರೆ.



