ದಕ್ಷಿಣ ಕನ್ನಡ, ಮೇ. 12: ಜಿಲ್ಲೆಯಲ್ಲಿ ಸೋಮವಾರ ಮುಂಜಾನೆಯಿಂದ ಮೋಡ ಮುಸುಕಿದ ವಾತಾವರಣವಿತ್ತು. ಮಧ್ಯಾಹ್ನದ ಬಳಿಕ ವಿವಿಧೆಡೆ ಮಳೆಯಾಗಿದೆ.
ಸಂಜೆ ಸುಳ್ಯ ನಗರದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಿದ್ದು, ಪುತ್ತೂರಿನಲ್ಲಿ ಹನಿ ಮಳೆಯಾಗಿದೆ. ಮಂಗಳವಾರ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಮಂಗಳೂರಿನಲ್ಲಿ 34.4 ಡಿ. ಸೆ. ದಿನದ ಗರಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 0.5 ಡಿ. ಸೆ. ಏರಿಕೆ ಮತ್ತು 25.9 ಡಿ. ಸೆ. ಕನಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 0.8 ಡಿ. ಸೆ. ಏರಿಕೆ ಕಂಡಿತ್ತು.





