ಮಂಗಳೂರು: ದಕ್ಷಿಣ ಕನ್ನಡದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಹವಾಮಾನ ಇಲಾಖೆ ಮುನ್ಸೂಚನೆ ಬೆನ್ನಲ್ಲೇ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಆ.1 ಶನಿವಾರ ಜಿಲ್ಲೆಯಾದ್ಯಂತ ಎಲ್ಲಾ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಹೆಚ್.ವಿ. ದರ್ಶನ್ ಆದೇಶ ಹೊರಡಿಸಿದ್ದಾರೆ.

ಜಿಲ್ಲಾಧಿಕಾರಿಗಳ ಆದೇಶದಂತೆ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, ಪದವಿ ಪೂರ್ವ (PU), ಡಿಪ್ಲೋಮಾ ಮತ್ತು ಐಟಿಐ ಹಾಗೂ ಎಲ್ಲಾ ವಸತಿ ಶಾಲಾ- ಕಾಲೇಜುಗಳಿಗೆ ರಜೆ ಅನ್ವಯವಾಗಲಿದೆ.
ಆದೇಶ ಉಲ್ಲಂಘಿಸಿ ತರಗತಿಗಳನ್ನು ನಡೆಸುವ ಶಿಕ್ಷಣ ಸಂಸ್ಥೆಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005ರ ಅಡಿಯಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಸಿದೆ.



