ನವದೆಹಲಿ, ಜುಲೈ 3: ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ಕಾಣಿಕೆ ಹಣದ ದುರುಪಯೋಗದ ಬಗ್ಗೆ ನಿಷ್ಪಕ್ಷಪಾತ ತನಿಖೆಗೆ ಕರೆ ನೀಡಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್), ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ತಡೆಯಲು ಈ ಪ್ರಕರಣದಲ್ಲಿ ಕಠಿಣ ಕ್ರಮ ಕೈಗೊಳ್ಳುವುದು ಅಗತ್ಯ ಎಂದು ಹೇಳಿದೆ.
ರಾಮ ಮಂದಿರ ನಿರ್ಮಾಣಕ್ಕೆ ಭಕ್ತರು ನೀಡಿದ ಚಿನ್ನಾಭರಣ, ಹಣವನ್ನು ಲೂಟಿ ಮಾಡಿರುವುದರ ವಿರುದ್ಧ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಆರ್ಎಸ್ಎಸ್ (RSS) ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದೆ.



