ಡಿಕೆ ಶಿವಕುಮಾರ್ ಸಂಪುಟದ ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ಶುಕ್ರವಾರ ಬೆಳಗ್ಗೆ ರಾಜೀನಾಮೆ ನೀಡಿದರು. ಬೆಂಗಳೂರು ಅಭಿವೃದ್ಧಿ ಖಾತೆಗೆ ಅವರು ಪಟ್ಟು ಹಿಡಿದಿದ್ದರೂ ಅದಕ್ಕೆ ಮನ್ನಣೆ ದೊರೆತಿರಲಿಲ್ಲ. ಇದರಿಂದ ತೀವ್ರ ಅಸಮಾಧಾನಗೊಂಡ ಅವರು ಸಂಪುಟದಿಂದ ಹೊರಬರುವ ನಿರ್ಧಾರ ಪ್ರಕಟಿಸಿದ್ದಾರೆ. ಅಲ್ಲದೆ, ರಾಜೀನಾಮೆಗೆ ಅಸಲಿ ಕಾರಣಗಳು ಬೇರೆ ಇವೆ ಎಂದಿದ್ದು, ಅದನ್ನು ಬಹಿರಂಗಪಡಿಸಿದ್ದಾರೆ.





