ರವಿ ಡಿ. ಚನ್ನಣ್ಣನವರ್ ವರ್ಗಾವಣೆ ಆದೇಶ ಬದಲಾವಣೆ

 

ಬೆಂಗಳೂರು: ಅಕ್ಟೋಬರ್ 02 :ರಾಜ್ಯದಲ್ಲಿ ವರ್ಗಾವಣೆ ಸದ್ದು ಹೆಚ್ಚಾಗುತ್ತಿರುವುದಕ್ಕೆ ಸಾಕ್ಷಿ ಎಂಬಂತೆ  ಕರ್ನಾಟಕ ಸರ್ಕಾರ ಮತ್ತೆ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದೆ. ಕೆಲವು ದಿನಗಳ ಹಿಂದಷ್ಟೇ ವರ್ಗಾವಣೆಗೊಂಡಿದ್ದ ರವಿ ಡಿ. ಚನ್ನಣ್ಣನವರ್ ವರ್ಗಾವಣೆ ಆದೇಶದಲ್ಲಿ ಬದಲಾವಣೆ ಮಾಡಲಾಗಿದೆ. ಹೊಸ ಹುದ್ದೆಗೆ ಅವರನ್ನು ನಿಯೋಜನೆ ಮಾಡಿ ಆದೇಶ ಹೊರಡಿಸಿದೆ.

ಇದನ್ನೂ ಓದಿ:ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ನೀವೇ ಸಾಧಕರನ್ನು ಆಯ್ಕೆ ಮಾಡುವ ಅವಕಾಶ

ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಶನಿವಾರ ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ವರ್ಗಾವಣೆ ಕುರಿತು ಪರಿಷ್ಕೃತ ಆದೇಶ ಹೊರಡಿಸಿದೆ. ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ, ಬೆಂಗಳೂರು ಡಿಐಜಿಯಾಗಿ ಅವರನ್ನು ತಕ್ಷಣದಿಂದ ಮತ್ತು ಮುಂದಿನ ಆದೇಶದ ತನಕ ವರ್ಗಾವಣೆ ಮಾಡಲಾಗಿದೆ.

ರವಿ ಡಿ. ಚನ್ನಣ್ಣನವರ್ ಅವರನ್ನು ಕೆಲವು ದಿನಗಳ ಹಿಂದೆ ವರ್ಗಾವಣೆ ಮಾಡಲಾಗಿತ್ತು. ಆಂತರಿಕ ಭದ್ರತಾ ವಿಭಾಗದ ಡಿಐಜಿಯಾಗಿ ನಿಯೋಜನೆ ಮಾಡಲಾಗಿತ್ತು. ಈ ಆದೇಶವನ್ನು ಪರಿಷ್ಕರಣೆ ಮಾಡಿ ಅಕ್ಟೋಬರ್ 30ರಂದು ಆದೇಶ ಹೊರಡಿಸಲಾಗಿದೆ.

ಇದನ್ನೂ ಓದಿ: ಅ. 02 ರಂದು ಮಹಾತ್ಮಾ ಗಾಂಧೀಜಿ ಜಯಂತಿ : ಪ್ರಬಂಧ ಸ್ಪರ್ಧೆ ಫಲಿತಾಂಶ ಪ್ರಕಟ
ಕರ್ನಾಟಕ ಸರ್ಕಾರ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ, ಬೆಂಗಳೂರು ಡಿಐಜಿಯಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದ ಐಪಿಎಸ್ ಅಧಿಕಾರಿ ಡಿ. ಆರ್. ಸಿರಿ ಗೌರಿ ಅವರನ್ನು ವರ್ಗಾವಣೆ ಮಾಡಿದೆ. ಆ ಜಾಗಕ್ಕೆ ರವಿ ಡಿ. ಚನ್ನಣ್ಣನವರ್ ನೇಮಕಗೊಂಡಿದ್ದಾರೆ.

ವರ್ಗಾವಣೆ ಆದೇಶ ಬದಲು; ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ (ಕೆಎನ್-2009) ಅವರನ್ನು e-DPAR 162 SPS 2023, Date 8/6/2023ರ ಆದೇಶದಲ್ಲಿ ಆಂತರಿಕ ಭದ್ರತಾ ವಿಭಾಗದ ಡಿಐಜಿಯಾಗಿ ನಿಯೋಜನೆ ಮಾಡಲಾಗಿತ್ತು. ಶನಿವಾರ ಈ ಆದೇಶವನ್ನು ಪರಿಷ್ಕರಣೆ ಮಾಡಲಾಗಿದೆ.

ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದ ತನಕ ಡಿಐಜಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ, ಬೆಂಗಳೂರು ಆಗಿ ನೇಮಕ ಮಾಡಲಾಗಿದೆ. ಆದ್ದರಿಂದ ಕೆಲವೇ ದಿನಗಳಲ್ಲಿ ರವಿ ಡಿ. ಚನ್ನಣ್ಣನವರ್ ಎರಡು ಬಾರಿ ವರ್ಗಾವಣೆಗೊಂಡಿದ್ದಾರೆ.

ಅಲೋಕ್ ಕುಮಾರ್ ವರ್ಗಾವಣೆ; ಶುಕ್ರವಾರ ಕರ್ನಾಟಕ ಸರ್ಕಾರ ಕೆಲವು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿತ್ತು. ಅದರಲ್ಲಿ ಅಲೋಕ್ ಕುಮಾರ್ ಸೇರಿದ್ದರು. ಬೆಂಗಳೂರು ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಎಡಿಜಿಪಿಯಾಗಿದ್ದ ಅಲೋಕ್ ಕುಮಾರ್ ಅವರನ್ನು ಪೊಲೀಸ್ ತರಬೇತಿ ಕೇಂದ್ರಕ್ಕೆ ವರ್ಗಾಯಿಸಲಾಗಿತ್ತು.

ಇದನ್ನೂ ಓದಿ:ದಿನಕ್ಕೆ 30 ನಿಮಿಷಗಳ ಕಾಲ ಸೈಕ್ಲಿಂಗ್ ಮಾಡಿದರೆ ಎಷ್ಟು ಅನುಕೂಲ

ಪಿ. ರವೀಂದ್ರನಾಥ್ ಅವರ ನಿವೃತ್ತಿಯಿಂದ ತೆರವಾಗಿದ್ದ ಹುದ್ದೆಗೆ ಅಲೋಕ್ ಕುಮಾರ್ ಅವರನ್ನು ಸರ್ಕಾರ ನಿಯೋಜನೆ ಮಾಡಿ ಆದೇಶ ಹೊರಡಿಸಿತ್ತು. ಶನಿವಾರ ರವಿ ಡಿ. ಚನ್ನಣ್ಣನವರ್ ವರ್ಗಾವಣೆ ಮಾಡಿದೆ.

ಗೃಹ ಇಲಾಖೆ ವರ್ಗಾವಣೆ ಬಗ್ಗೆ ರಾಜ್ಯದ ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ಹಲವು ಬಾರಿ ಆರೋಪ ಮಾಡಿವೆ. ಸರ್ಕಾರ ವರ್ಗಾವಣೆ ದಂಧೆ ಮಾಡುತ್ತಿದೆ ಎಂದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರವನ್ನು ಟೀಕಿಸಿವೆ. ಭಾನುವಾರ ಕೂಡಾ ಬಿಜೆಪಿ ಟ್ವೀಟ್ ಮಾಡಿ, ‘ಸಿದ್ದರಾಮಯ್ಯರವರ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ಆಡಳಿತದಲ್ಲಿ ರಾಜ್ಯದ ಆರು ಕೋಟಿ ಕನ್ನಡಿಗರು ನೆಮ್ಮದಿಯಲ್ಲಿಲ್ಲ ಎಂಬುದು ಎಷ್ಟು ಸತ್ಯವೋ, ಕೈ ಪಕ್ಷದ ನಾಯಕರಿಗೂ ಸಿದ್ದರಾಮಯ್ಯ ಅವರ ಆಡಳಿತ ತೃಪ್ತಿ ತಂದಿಲ್ಲ ಎಂಬುದೂ ಅಷ್ಟೇ ಸತ್ಯ’ ಎಂದು ಹೇಳಿತ್ತು.
ಮತ್ತೊಬ್ಬರನ್ನು ರಾಜಕೀಯವಾಗಿ ತುಳಿಯುವ ಗುಣದ ಸಿದ್ದರಾಮಯ್ಯರವರು 2013ರಲ್ಲಿ ಕೊರಟಗೆರೆಯಲ್ಲಿ ಡಾ. ಪರಮೇಶ್ವರ್ ಅವರು ಸೋಲುವಂತೆ ನೋಡಿಕೊಂಡಿದ್ದೂ ಅಲ್ಲದೆ, ಇದೀಗ ಅವರ ಗೃಹ ಇಲಾಖೆಗೆ ಉಳಿದವರು ಹಸ್ತಕ್ಷೇಪ ಮಾಡಲು ಕುಮ್ಮಕ್ಕು ನೀಡಿ ಉದ್ದೇಶಪೂರ್ವಕವಾಗಿ ಪರಮೇಶ್ವರರನ್ನು ಡಮ್ಮಿ ಮಂತ್ರಿ ಮಾಡಿ ಕೂರಿಸಿದ್ದಾರೆ’ ಎಂದು ಗೃಹ ಇಲಾಖೆ ಬಗ್ಗೆ ಟ್ವೀಟ್ ಮಾಡಿ ಗಮನ ಸೆಳೆದಿತ್ತು.

[t4b-ticker]

You May Also Like

More From Author

+ There are no comments

Add yours