ಕುರುಬ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ(ST) ಸಮುದಾಯಕ್ಕೆ ಸೇರಿಸಲು ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸ್ಸು

 

ಬೆಂಗಳೂರು: ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡ (ST) ಸಮುದಾಯಕ್ಕೆ ಸೇರಿಸುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಿದೆ.

ಮಂಗಳವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಧಾರ ಮಾಡಲಾಗಿದ್ದು, ಈ ಸಂಬಂಧ ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಯಿಂದ ಕೇಂದ್ರ ಸರ್ಕಾರಕ್ಕೆ ಪತ್ರವನ್ನು ಕಳುಹಿಸಲಾಗಿದೆ.

ಈ ಹಿಂದೆ ಮೈಸೂರು, ಚಾಮರಾಜನಗರ ಜಿಲ್ಲೆಯ ಕೆಲ ಪ್ರದೇಶಗಳಲ್ಲಿ ಇದ್ದ ಕಾಡು ಕುರುಬರನ್ನು ಮಾತ್ರವೇ ಎಸ್‌ಟಿ ಪಂಗಡಕ್ಕೆ ಸೇರಿಸಲಾಗಿತ್ತು. ಬಳಿಕ 2020-21ರಲ್ಲಿ ರಾಜ್ಯಾದ್ಯಂತ ಎಲ್ಲಾ ಕುರುಬ ಸಮುದಾಯದವರನ್ನು ಎಸ್‌ಟಿ ಸಮುದಾಯಕ್ಕೆ ಸೇರಿಸುವಂತೆ ನಿರಂಜನಾನಂದ ಪುರಿ ಸ್ವಾಮೀಜಿ ಹಾಗೂ ಸಮುದಾಯದ ಮುಖಂಡರು ಕಾಗಿನೆಲೆಯಿಂದ ಬೆಂಗಳೂರಿನವರೆಗೂ ಬೃಹತ್ ಪಾದಯಾತ್ರೆ ನಡೆಸಿದ್ದರು.

[t4b-ticker]

You May Also Like

More From Author

+ There are no comments

Add yours