ಮುರುಘಾ ಮಠದ ಶಿವಮೂರ್ತಿ ಶರಣರಿಗೆ ಬಿಡುಗಡೆ ಆದೇಶ

 

ಚಿತ್ರದುರ್ಗ:ಹಲವು ತಿಂಗಳಿನಿಂದ  ಪೋಕ್ಸೊ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ  ಡಾ. ಶಿವಮೂರ್ತಿ ಮುರುಘಾ ಶರಣರ  (Shivamurthy Murugha Sharanaru)  ಜೈಲಿನಿಂದ ಬಿಡುಗಡೆ ಮಾಡಲು ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಬುಧವಾರ ಆದೇಶ ನೀಡಿದ್ದು ಬಿಡುಗಡೆ ಭಾಗ್ಯ ದೊರೆತಿದೆ.

ಈ ಸಂದರ್ಭದಲ್ಲಿ  ಎರಡನೇ ಪೋಕ್ಸೊ ಪ್ರಕರಣದಲ್ಲಿ ಶರಣರ ವಿರುದ್ಧ ಹೊರಡಿಸಿದ ಬಾಡಿ ವಾರೆಂಟ್ ಅನ್ನು ನ್ಯಾಯಾಂಗ ಬಂಧನವಾಗಿ ಪರಿವರ್ತನೆ ಮಾಡಬೇಕು ಎಂಬ ಸರ್ಕಾರಿ ವಕೀಲರ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ನ.16ಕ್ಕೆ ಅಂದರೆ ನಾಳೆಗೆ ಕೋರ್ಟ್  ಮುಂದೂಡಿದ್ದು ಹಲವು ಭವಿಷ್ಯ ನಿರ್ಧಾರವಾಗಲಿದೆ.

ಇಬ್ಬರು  ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ದಾಖಲಾದ ಪ್ರಕರಣದಲ್ಲಿ ಶಿವಮೂರ್ತಿ ಮುರುಘಾ ಶರಣರಿಗೆ ಹೈಕೋರ್ಟ್ ಈಚೆಗೆ ಜಾಮೀನು ನೀಡಿತ್ತು. ಜಾಮೀನು ಷರತ್ತು ಪೂರೈಸಲು ಶರಣರ ಪರ ವಕೀಲರು ಸೆಷನ್ಸ್ ನ್ಯಾಯಾಲಯದ ಮೊರೆಹೋಗಿದ್ದರು. ಇಬ್ಬರು ವ್ಯಕ್ತಿಗಳ ಭದ್ರತಾ ಖಾತರಿ ಪರಿಶೀಲಿಸಿದ ನ್ಯಾಯಾಧೀಶೆ ಬಿ.ಕೆ.ಕೋಮಲಾ ಬಿಡುಗಡೆ ಆದೇಶ ನೀಡಿದರು.

ಎರಡನೇ ಪೋಕ್ಸೊ ಪ್ರಕರಣದಲ್ಲಿ ಶರಣರ ವಿರುದ್ಧ ಹೊರಡಿಸಿದ ಬಾಡಿ ವಾರೆಂಟ್ ಅನ್ನು ನ್ಯಾಯಾಂಗ ಬಂಧನದ ಆದೇಶವಾಗಿ ಪರಿವರ್ತಿಸುವಂತೆ ಪ್ರಾಸಿಕ್ಯೂಷನ್ ಪರವಾಗಿ ಸರ್ಕಾರಿ ವಕೀಲರು ಮಾಡಿದ ಮನವಿಯನ್ನು ಪುರಸ್ಕರಿಸಿದ್ದ ನ್ಯಾಯಾಲಯಕ್ಕೆ ಶರಣರ ಪರ ವಕೀಲರು ಬುಧವಾರ ತಕರಾರು ಸಲ್ಲಿಸಿದರು. ವಾದ- ಪ್ರತಿವಾದಕ್ಕೆ ನ.16ಕ್ಕೆ ವಿಚಾರಣೆ ನಿಗದಿಪಡಿಸಿ ಕಲಾಪವನ್ನು ಮುಂದೂಡಲಾಯಿತು.

ಇದನ್ನೂ ಓದಿ: ನಾಳೆ ವಿದ್ಯುತ್ ವ್ಯತ್ಯಯ ಎಲ್ಲೆಲ್ಲಿ ಪವರ್ ಕಟ್

‘ಎರಡನೇ ಪ್ರಕರಣದಲ್ಲಿ ಶರಣರನ್ನು ಬಂಧನ ಮಾಡದೇ ಇರುವುದರಿಂದ ಕಾರಾಗೃಹದಲ್ಲಿ ಇಟ್ಟುಕೊಳ್ಳುವಂತಿಲ್ಲ’ ಎಂದು ಶರಣರ ಪರ ವಕೀಲ ಸಂದೀಪ್ ಪಾಟೀಲ್ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದರು.

ಸರ್ಕಾರಿ ವಕೀಲ ಜಗದೀಶ್ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ‘ಎರಡನೇ ಪೋಕ್ಸೊ ಪ್ರಕರಣದ ಬಾಡಿ ವಾರೆಂಟ್ ವಿಚಾರಣೆ ನ್ಯಾಯಾಲಯಲ್ಲಿರುವುದರಿಂದ ಶರಣರನ್ನು ಬಿಡುಗಡೆ ಮಾಡಲು ಸಾಧ್ಯವಿಲ್ಲ. ಜೈಲಿನಿಂದ‌ ಬಿಡುಗಡೆ ಮಾಡದಂತೆ ನಾವೂ ಕಾರಾಗೃಹಕ್ಕೆ ಮನವಿ ಮಾಡಿಕೊಳ್ಳಲಿದ್ದೇವೆ. ಅವರನ್ನು ಕಾರಾಗೃಹದಲ್ಲಿ ಇಡಲು ಕಾನೂನಿನಲ್ಲಿ ಅವಕಾಶ ಇದೆ’ ಎಂಬ ಅಭಿಪ್ರಾಯ ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours