ನಾರಾವಿ: ನಾರಾವಿ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ.), ಯುವ ಬಿಲ್ಲವ ವೇದಿಕೆ ಹಾಗೂ ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ನಿರ್ಮಾಣ ಆಗುತ್ತಿರುವ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಮಂದಿರಕ್ಕೆ ಧಾರ್ಮಿಕ ಮುಖಂಡ ಕಿರಣ್ಚಂದ್ರ ಪುಷ್ಪಗಿರಿ ಅವರು ಭೇಟಿ ನೀಡಿ ಮೆಚ್ಚುಗೆ ವ್ಯಕ್ತಪಡಿಸಿ ಗುರುಮಂದಿರದ ಮೇಲ್ಚಾವಣಿ ನಿರ್ಮಾಣಕ್ಕೆ ರೂ. 2 ಲಕ್ಷದಷ್ಟು ದೇಣಿಗೆ ನೀಡುವುದಾಗಿ ಘೋಷಿಸಿದರು.
ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳು ಅವರನ್ನು ಗೌರವಿಸಿ, ಕೃತಜ್ಞತೆ ಸಲ್ಲಿಸಿದರು. ಸಂಘದ ಸದಸ್ಯರು ಉಪಸ್ಥಿತರಿದ್ದರು.









