ಭಾರತೀಯ ಚಿತ್ರರಂಗದ ಪ್ರಸಿದ್ಧ ಗಾಯಕಿ ಸುಮನ್ ಕಲ್ಯಾಣ್ಪುರ್ 89ರ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಆರು ದಶಕಗಳಿಗೂ ಹೆಚ್ಚು ಕಾಲ ಸಂಗೀತ ಲೋಕವನ್ನು ತಮ್ಮ ಧ್ವನಿಯಿಂದ ಆಳಿದ ಇವರು, ಹಿಂದಿ, ಮರಾಠಿ, ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಸಾವಿರಾರು ಗೀತೆಗಳನ್ನು ಹಾಡಿದ್ದಾರೆ. ಕನ್ನಡದಲ್ಲಿ ಮೂರು ಅದ್ಭುತ ಹಾಡುಗಳ ಮೂಲಕ ಕನ್ನಡಿಗರ ಮನಗೆದ್ದಿದ್ದ ಸುಮನ್ ಅವರ ನಿಧನಕ್ಕೆ ಸಂಗೀತ ಪ್ರೇಮಿಗಳು ಕಂಬನಿ ಮಿಡಿದಿದ್ದಾರೆ.
ಕನ್ನಡದಲ್ಲೂ ಮಧುರ ಗೀತೆಗಳನ್ನು ಹಾಡಿದ್ದ ಖ್ಯಾತ ಗಾಯಕಿ ಸುಮನ್ ಕಲ್ಯಾಣ್ಪುರ್ ಇನ್ನಿಲ್ಲ





