ಚಿತ್ರದುರ್ಗ,ಜನವರಿ21:
ಜ.26ರಂದು ಆಚರಿಸುವ ಗಣರಾಜ್ಯೋತ್ಸವ ಸಮಾರಂಭದ ಎಲ್ಲಾ ಕಾರ್ಯಕ್ರಮಗಳಲ್ಲಿ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರು ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಬಾಲಕೃಷ್ಣ ಸೂಚನೆ ನೀಡಿದ್ದಾರೆ.
ಭಾರತದ 72ನೇ ಗಣರಾಜ್ಯೋತ್ಸ ಸಮಾರಂಭದ ಅಂಗವಾಗಿ ಜನವರಿ 26ರಂದು ಬೆಳಿಗ್ಗೆ 9.00ಗಂಟೆಗೆ ಚಿತ್ರದುರ್ಗ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ರಾಷ್ಟ್ರಧ್ವಜಾರೋಹಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಸರ್ಕಾರಿ ಮತ್ತು ಅರೆ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರು ಕಡ್ಡಾಯವಾಗಿ ಭಾಗವಹಿಸಬೇಕು.
ಗಣರಾಜ್ಯೋತ್ಸವ ಕಾರ್ಯಕ್ರಮಗಳಲ್ಲಿ ಭಾಗವಹಿಸದ ಅಧಿಕಾರಿಗಳು, ನೌಕರರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
[t4b-ticker]
+ There are no comments
Add yours