ವಸತಿ ಶಾಲೆ: 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

 

ಚಿತ್ರದುರ್ಗ(ಕರ್ನಾಟಕ ವಾರ್ತೆ)ಫೆ.16:
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ.ಎಪಿಜೆ ಅಬ್ದುಲ್ ಕಲಾಂ ಮತ್ತು ಅಲ್ಪಸಂಖ್ಯಾತರ ಮೊರಾರ್ಜಿ ವಸತಿ ಶಾಲೆಗಳಿಗೆ 2024-25ನೇ ಸಾಲಿಗೆ 6ನೇ ತರಗತಿ ಪ್ರವೇಶಕ್ಕಾಗಿ ಅಲ್ಪಸಂಖ್ಯಾತರ ಸಮುದಾಯದವರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್, ಪಾರ್ಸಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳ ಅರ್ಹ ವಿದ್ಯಾರ್ಥಿಗಳು ಅರ್ಜಿಯನ್ನು ಸೇವಾಸಿಂಧು ತಂತ್ರಾಂಶದಲ್ಲಿ ಮೂಲಕ ಸಲ್ಲಿಸಬಹುದಾಗಿದೆ.
ಆನ್‍ಲೈನ್ ಅರ್ಜಿ ಸಲ್ಲಿಕೆಯು ಈಗಾಗಲೇ ಫೆ.16 ರಿಂದ ಪ್ರಾರಂಭವಾಗಿದ್ದು, ಮಾರ್ಚ್ 15 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಹಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಅಬ್ದುಲ್ ಕಲಾಂ ವಸತಿ ಶಾಲೆ, ಮೆದೇಹಳ್ಳಿ, ದೂರವಾಣಿ ಸಂಖ್ಯೆ -7892847359, ಪ್ರಾಂಶುಪಾಲರು, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಚಳ್ಳಕೆರೆ ದೂರವಾಣಿ ಸಂಖ್ಯೆ – 8746863391. ಪ್ರಾಂಶುಪಾಲರು, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ದೇವರಕೊಟ್ಟ ದೂರವಾಣಿ ಸಂಖ್ಯೆ – 7760708033. ತಾಲ್ಲೂಕು ವಿಸ್ತರಣಾಧಿಕಾರಿಗಳು, ಚಿತ್ರದುರ್ಗ ಉಪವಿಭಾಗ-8660935784. ತಾಲ್ಲೂಕು ವಿಸ್ತರಣಾಧಿಕಾರಿಗಳು, ಚಳ್ಳಕೆರೆ ಉಪವಿಭಾಗ – 9986781471, ಜಿಲ್ಲಾ ಮಾಹಿತಿ ಕೇಂದ್ರ- ದೂ. ಸಂ: 08194-234836, 9901238248, ತಾಲ್ಲೂಕು ಮಾಹಿತಿ ಕೇಂದ್ರ ಹೊಸದುರ್ಗ- 8152975750. ತಾಲ್ಲೂಕು ಮಾಹಿತಿ ಕೇಂದ್ರ , ಹಿರಯೂರು -9964115450. ತಾಲ್ಲೂಕು ಮಾಹಿತಿ ಕೇಂದ್ರ, ಹೊಳಲ್ಕೆರೆ -9901788735, ತಾಲ್ಲೂಕು ಮಾಹಿತಿ ಕೇಂದ್ರ ಚಳ್ಳಕೆರೆ -9916159746, ತಾಲ್ಲೂಕು ಮಾಹಿತಿ ಕೇಂದ್ರ ಮೊಳಕಾಲ್ಮೂರು –9482069786 ಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours