ಉಡುಪಿ: ಪಡುಬಿದ್ರಿಯಲ್ಲಿ ಟೆಂಪೋ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ೨೨ ವರ್ಷದ ವಿದ್ಯಾರ್ಥಿನಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಸಾವನ್ನಪ್ಪಿದ್ದಾಳೆ.
ಮೃತಳನ್ನು ಪಡುಬಿದ್ರಿಯ ನಡ್ಸಾಲು ಬಿಲ್ಲಿತೋಟ ನಿವಾಸಿ ಪ್ರೇಕ್ಷಾ ಎಂದು ಗುರುತಿಸಲಾಗಿದೆ. ಮಂಗಳೂರು ಕಡೆಗೆ ಸರ್ವಿಸ್ ರಸ್ತೆ ದಾಟುತ್ತಿದ್ದಾಗ ಉಡುಪಿ ಕಡೆಯಿಂದ ಬರುತ್ತಿದ್ದ ಗೂಡ್ಸ್ ಟೆಂಪೋ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ರಸ್ತೆಗೆ ಬಿದ್ದು ತಲೆಗೆ ತೀವ್ರ ಪೆಟ್ಟಾಗಿ ಅವರನ್ನು ಸ್ಥಳೀಯರು ಆಕೆಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಿ, ನಂತರ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದರು. ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.









