ಬೆಳ್ತಂಗಡಿ: ತಾಲೂಕಿನ ಶಿಶಿಲ ಗ್ರಾಮದ ಶಿಶಿಲೇಶ್ವರ ದೇವಸ್ಥಾನದ ಬಳಿ ಕಪಿಲ ನದಿಗೆ ಸೇತುವೆ ನಿರ್ಮಾಣ ಕಾಮಗಾರಿಗೆ ಸನ್ಮಾನ್ಯ ಮುಖ್ಯಮಂತ್ರಿಯವರ ಟಿಪ್ಪಣಿ ಮೇರೆಗೆ 4.99 ಕೋಟಿ 36 ಲಕ್ಷ ರೂ. ಅನುದಾನ ಮಂಜೂರುಗೊಂಡಿದೆ ಎಂದು ಕೆಪಿಸಿಸಿ ಕಾರ್ಯದರ್ಶಿ ರಕ್ಷಿತ್ ಶಿವರಾಂ ತಿಳಿಸಿದ್ದಾರೆ.
ಈ ಕಾಮಗಾರಿಗೆ ಈ ಮೊದಲು 275.00 ಲಕ್ಷಗಳ ಅನುದಾನ (ಲೆ.ಶೀ.೫೦೫೪-೦೩-೧೦೧-೦-೦೨-೧೩೨ ಪ್ರಮೂಖ ಜಿಲ್ಲಾ ಮುಖ್ಯ ರಸ್ತೆ ಸುಧಾರಣೆ) ಬಿಡುಗಡೆಗೆ ಆದೇಶವಾಗಿದ್ದು, ಅದರೆ ಸದ್ರಿ ಸೇತುವೆ ನಿರ್ಮಾಣ ಕಾಮಗಾರಿಗೆ ಲೋಕೋಪಯೋಗಿ ಇಲಾಖೆಯ ಅಂದಾಜು ಮೊತ್ತದಂತೆ ಈ ಕಾಮಗಾರಿಗೆ 499.36 ಲಕ್ಷಗಳ ಅನುದಾನ ಬೇಕಾಗಿತ್ತು. ಆಗಾಗಿ ಕಾಮಗಾರಿಗೆ ಹೆಚ್ಚುವರಿ ಅನುದಾನ ಅನುದಾನ ಬಿಡುಗಡೆ ಮಾಡುವಂತೆ ಲೋಕೋಪಯೋಗಿ ಸಚಿವರು ಬೆಳ್ತಂಗಡಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮನವಿ ಮಾಡಲಾಗಿತ್ತು. ಆ ಮನವಿಗೆ ಪೂರಕವಾಗಿ ಸ್ಪಂದಿಸಿದ ಸಚಿವರು ಬೆಳ್ತಂಗಡಿ ತಾಲ್ಲೂಕು ಶಿಶಿಲ ಗ್ರಾಮದ ಶಿಶಿಲೇಶ್ವರ ದೇವಸ್ಥಾನದ ಬಳಿ ಕಪಿಲ ನದಿಗೆ ಅಡ್ಡಲಾಗಿ ಸೇತುವೆ ರ್ಮಾಣ ಕಾಮಗಾರಿಗೆ ಅನುದಾನ ಬಿಡುಗಡೆ ಮಾಡಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





